ಕನ್ನಡಪ್ರಭ ವಾರ್ತೆ ಮಂಗಳೂರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನವೆಂಬರ್ 1ರಂದು ನೆಹರು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ರಾಜೇಂದ್ರ, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್ ನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರಾಜೇಶ್ ಜಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.