ಹಳಿಯಾಳ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಸರ್ಕಾರದಿಂದ ಮಂಜೂರಾದ ₹1.25 ಕೋಟಿ ಅನುದಾನದಲ್ಲಿ 5 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಉತ್ತಮ ಚಾರಿತ್ರ್ಯ ಹಾಗೂ ಮಾನವೀಯ ಮೌಲ್ಯಗಳ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಶಿಸ್ತು ಸ್ವಚ್ಛತೆಗೆ ಆದ್ಯತೆ ಇರಲಿ:ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಠಡಿಗಳ ಕೊರತೆ ಎದುರಾಗಿದೆ ಎಂಬ ಅಂಶವು ನನಗೆ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಗಮನಕ್ಕೆ ಬಂದಿತು. ಶಾಸಕರ ಅಭಿವೃದ್ಧಿ ನಿಧಿಯಿಂದ ಎರಡೂ ಕೊಠಡಿಗಳ ನಿರ್ಮಾಣ ಮಾಡಿದ್ದು, ಅದರಲ್ಲಿ ಬಾಕಿ ಉಳಿದಿರುವ ಇನ್ನಿತರ ಕಾಮಗಾರಿಗಳು ಮಾಡಬೇಕಾಗಿದೆ. ಈಗ 1.25 ಕೋಟಿ ವೆಚ್ಚದಲ್ಲಿ 5 ಕೊಠಡಿಗಳ ನಿರ್ಮಾಣವಾಗಲಿದ್ದು, ಹೀಗೆ ಕಾಲೇಜಿಗೆ 7 ಹೆಚ್ಚುವರಿ ಕೊಠಡಿಗಳು ಸಿಗಲಿವೆ. 21ನೇ ಶತಮಾನವು ಸ್ಪರ್ಧಾತ್ಮಕ ಯುಗವಾಗಿದ್ದು, ಇಲ್ಲಿ ಪ್ರತಿಭಾವಂತರಿಗೆ ಮತ್ತು ಕೌಶಲ್ಯವಂತರಿಗೆ ಮಾತ್ರ ಉತ್ತಮ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಯುವ ಸಮೂಹವು ಈ ಸ್ಪರ್ಧಾತ್ಮಕ ಯುಗದಲ್ಲಿ ಜಯಶಾಲಿಯಾಗಲು ಸಿದ್ಧರಾಗಬೇಕು. ಈ ದಿಸೆಯಲ್ಲಿ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡುವುದರ ಜೊತೆಯಲ್ಲಿ ಕಾಲೇಜಿನಲ್ಲಿ ಶಿಸ್ತು ಸ್ವಚ್ಛತೆ ಕಾಪಾಡಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಮುರ್ಕವಾಡದಲ್ಲೂ ಶಿಲಾನ್ಯಾಸ: