ಕನ್ನಡಪ್ರಭ ವಾರ್ತೆ ಬಾದಾಮಿ
ಮಂಗಳವಾರ ನಗರದ ತಾಪಂ ಸಭಾಭವನದಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರಿನ ಸಂಗ್ರಹ, ಸಮರ್ಪಕ ನಿರ್ವಹಣೆ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಮಳೆ ಕೊರತೆಯ ನಡುವೆಯೂ ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ತಹಶೀಲ್ದಾರ್ ಹಾಗೂ ತಾಪಂ ಇಒ ಪ್ರತಿ ಗ್ರಾಪಂಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿ ಪರಿಶೀಲಿಸಬೇಕು ಎಂದು ಸೂಚಿಸಿದರು. ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಜನರಲ್ಲಿ ನೀರಿನ ಸಂರಕ್ಷಣೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ತಹಶೀಲದಾರ ಅಮರೇಶ ಪಮ್ಮಾರ, ತಾ.ಪಂ.ಇಒ ಸತೀಶ ಮಾಕೊಂಡ ಹಾಜರಿದ್ದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜನರ ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಮೊದಲ ಕರ್ತವ್ಯ. ಬರದ ಪರಿಣಾಮವನ್ನು ಎದುರಿಸಲು ಸರ್ಕಾರದೊಂದಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.