)
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಕರಣ ರದ್ದು ಕೋರಿ ಡಾ.ಲೋಕೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರು ಸರ್ಕಾರಿ ವೈದ್ಯರಾಗಿ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಅವರ ಕರ್ತವ್ಯ. ಗೆಜೆಟೆಡ್ ಅಧಿಕಾರಿಯಾಗಿ ದಾಖಲೆಗಳನ್ನು ದೃಢೀಕರಿಸುವ ಅಧಿಕಾರ ಅವರಿಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಆದರೆ, ವಿಳಾಸಕ್ಕೆ ಸಂಬಂಧಿಸಿದಂತೆ ಯಾವುದೇ ಬಾಡಿಗೆ ಕರಾರು ಪತ್ರ ಅಥವಾ ಇತರೆ ಅಗತ್ಯ ದಾಖಲೆಗಳನ್ನು ಪರಿಶೀಲಿಸದೆ 14 ವಿದೇಶಿ ಪ್ರಜೆಗಳಿಗೆ ವಿಳಾಸ ದೃಢೀಕರಿಸಿದ್ದಾರೆ. ಒಂದಿಬ್ಬರಿಗೆ ಮಾಡಿದ್ದರೆ ಆಕಸ್ಮಿಕ ಎನ್ನಬಹುದಿತ್ತು. ಆದರೆ, ಅನೇಕರಿಗೆ ವಿಳಾಸ ದೃಢೀಕರಣ ಮಾಡಲಾಗಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಬಾಡಿಗೆ ನೀಡಿದವನಿಗೆ ರಿಲೀಫ್:ಇದೇ ಪ್ರಕರಣದಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳಿಗೆ ಶೆಡ್ ಬಾಡಿಗೆಗೆ ನೀಡಿದ್ದಲ್ಲದೆ, ಬಾಡಿಗೆ ಕರಾರು ಪತ್ರ ಮಾಡಿಸಿಕೊಟ್ಟು ಆಧಾರ್ ಕಾರ್ಡ್ ಪಡೆಯಲು ನೆರವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಆರೋಪಿಯೊಬ್ಬರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ತನಿಖಾಧಿಕಾರಿಗಳು ಈ ಆರೋಪಿಯ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿಲ್ಲ ಎಂದು ನ್ಯಾಯಪೀಠ ಹೇಳಿದೆ.