ಅಳ್ನಾವರ:
ಅಳ್ನಾವರದಲ್ಲಿ ವಿವಿಧೆಡೆ ಮತದಾರರನ್ನು ಭೇಟಿಯಾಗಿ ಮತಯಾಚಿಸಿದ ಅವರು, ನೌಕರರ ಪ್ರಮುಖ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ನಡೆಸಿದ ಸತತ ಪ್ರಯತ್ನ ನಿರ್ಣಾಯಕ ಹಂತಕ್ಕೆ ಬಂದಿದೆ ಎಂದು ತಿಳಿಸಿದರು.
ಸತತ ಒತ್ತಾಯದ ಫಲವಾಗಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದ ಅವರು, ಕ್ಷೇತ್ರದಲ್ಲಿ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ಬಹಳಷ್ಟು ನಿರುದ್ಯೋಗಿಗಳಿಗೆ ಕೆಲಸ ಸಿಗುವಂತೆ ಮಾಡಿದ್ದೇನೆ. ಎಲ್ಲೆಡೆ ಕೈಗಾರಿಕಾ ವಸಾಹತುಗಳನ್ನು ನಿರ್ಮಿಸುವ ಮೂಲಕ ಹೊಸ ಉದ್ದಿಮೆಗಳನ್ನು ಪ್ರಾರಂಭಿಸಿದರೆ ನಿರುದ್ಯೋಗ ಸಮಸ್ಯೆ ಪರಿಹರಿಸಲು ಸಾಧ್ಯವಿದೆ ಎಂದರು.ಕಳೆದೆರಡು ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರುವ ಕೊಡುಗೆಗಳಿಂದ ಮತದಾರರು ನನ್ನ ಬಗ್ಗೆ ಒಲವು ತೋರಲು ಸಹಕಾರಿಯಾಗಿದೆ. ಮತ್ತೊಂದು ಸಲ ಕ್ಷೇತ್ರದ ಮತದಾರರು ನನ್ನ ಬಗ್ಗೆ ಒಲವು ತೋರಿದ್ದಾರೆ. ಮುಂದಿನ ಅವಧಿಯಲ್ಲಿ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮವಹಿಸಲಾಗುವು ಎಂದು ಸಂಕನೂರು ಹೇಳಿದರು.