ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಬಸವರಾಜ ದಢೇಸೂಗುರು

KannadaprabhaNewsNetwork |  
Published : Jun 18, 2025, 12:53 AM IST
ಕಾರಟಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾಕ್ಕೆ 11 ವರ್ಷಾಚರಣೆ ಹಾಗೂ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ರಾಜ್ಯದಲ್ಲಿ ಮುಖ್ಯವಾಗಿ ನಮ್ಮ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸಿಂಧನೂರು, ಕಾರಟಗಿ, ಕುಷ್ಟಗಿಗೆ ರೈಲ್ವೆ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ.

ಕಾರಟಗಿ:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಕಾರಟಗಿ, ಕುಷ್ಟಗಿ ಮತ್ತು ಸಿಂಧನೂರು ಭಾಗಕ್ಕೆ ರೈಲು ಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು ಹೇಳಿದರು.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11ರ ವರ್ಷಾಚರಣೆ ಹಾಗೂ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೇಂದ್ರ ಸರ್ಕಾರ ರಾಜ್ಯದಲ್ಲಿ ಮುಖ್ಯವಾಗಿ ನಮ್ಮ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸಿಂಧನೂರು, ಕಾರಟಗಿ, ಕುಷ್ಟಗಿಗೆ ರೈಲ್ವೆ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಬಡವರ ಪರ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಉತ್ತರ ಪ್ರದೇಶದ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಮಾತನಾಡುತ್ತಾರೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಬಗ್ಗೆ ಚಕಾರ ಎತ್ತುತ್ತಿಲ್ಲ. ಚಿನ್ನಸ್ವಾಮಿ ಬಳಿ ಕೇವಲ 1 ಲಕ್ಷ ಜನಸಂಖ್ಯೆ ನಿಯಂತ್ರಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದ ಅವರು, ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತಿಲ್ಲ. ಐದಾರು ತಿಂಗಳು ಕಳೆದ ಬಳಿಕ ಚುನಾವಣೆ ಬಂದರೆ ಆಗ ಇವರು ಹಣ ನೀಡುತ್ತಾರೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಸಂಚಾಲಕ ಜಿ. ಶ್ರೀಧರ ಕೆಸರಟ್ಟಿ, ಸಂಚಾಲಕ ಅಮರೇಶ ಕುಳಗಿ, ಮಂಡಲ ಅಧ್ಯಕ್ಷ ಮಂಜುನಾಥ್ ಮಸ್ಕಿ, ಮುಖಂಡರಾದ ಚಂದ್ರಶೇಖರ ಮುಸಲಿ, ಪುರಸಭೆ ಸದಸ್ಯರಾದ ಬಸವರಾಜ್ ಕೊಪ್ಪದ ಮತ್ತು ಆನಂದ ಕೆಂಗೇರಿ, ರಾಜಶೇಖರ ಗುಂಡೂರ, ಮಾರೇಶ ಮೋತಿ, ಮಾಂತಗೌಡ, ದೇವರಾಜ್ ನಾಯಕ, ಹನುಮಂತಪ್ಪ ಕಬ್ಬೇರ ಸೇರಿ ಇತರರಿದ್ದರು‌.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ