ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ

KannadaprabhaNewsNetwork | Published : Jun 25, 2024 12:39 AM

ಸಾರಾಂಶ

ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಉಪಾಧ್ಯಕ್ಷರು, ಸದಸ್ಯರಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಮ್ಮ ಸರ್ಕಾರ ಪ್ರತಿ ಕುಟುಂಬ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಅದು ಅನುಷ್ಠಾನ ಗೊಳಿಸಲು ರಾಜ್ಯ, ಜಿಲ್ಲೆ, ತಾಲೂಕು ಸಮಿತಿ ಮಾಡಿದೆ. ಜಿಲ್ಲಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಅರ್ಹ ಕುಟುಂಬಗಳಿಗೆ ಯೋಜನೆ ಉಪಯೋಗವಾಗಬೇಕೆಂದು ಸಮಾಜಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಉಪಾಧ್ಯಕ್ಷರು, ಸದಸ್ಯರಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಿ ಅವರು ಮಾತನಾಡಿದರು. ಅಭಿನಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪದಾಧಿಕಾರಿಗಳನ್ನು ಸರ್ಕಾರದ ವತಿಯಿಂದ ಅಭಿನಂದಿಸಲಾಗಿದೆ. ಅನುಷ್ಟಾನ ಸಮಿತಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ಚಂದ್ರು, ಉಪಾಧ್ಯಕ್ಷ ಸೋಮೇಶ್ವರ, ಎಸ್.ಪ್ರಭುಪ್ರಸಾದ್, ಸಿದ್ದರಾಜು, ಎಸ್‌ಆರ್‌ಎಸ್ ರಾಜಶೇಖರ್, ಕೆ.ಎನ್.ಪ್ರದೀಪ್‌ಕುಮಾರ್, ಆರ್. ಉಮೇಶ್, ಶಿವಮೂರ್ತಿ, ಬಿ.ಪಿ.ನಾಗರಾಜಮೂರ್ತಿ, ಕೆ.ಬಿ. ಚಿನ್ನಸ್ವಾಮಿ, ಉಮಾಪತಿ, ಎಂ.ಪ್ರದೀಪ್, ರವಿಕುಮಾರ್, ರಾಚಪ್ಪ, ದಯಾನಿಧಿ, ರವಿ, ಅಕ್ಬರ್‌ಪಾಷ, ಆರ್. ರಾಜೇಂದ್ರ, ಹೆಚ್.ಎನ್.ಜಯರಾಜು, ಭಾಗ್ಯ, ಎಂ.ದೇವರಾಜು ಅವರನ್ನು ಅಭಿನಂದಿಸಲಾಯಿತು. ಗ್ಯಾರಂಟಿ ಯೋಜನೆಗಳಅನುಷ್ಠಾನ ಜಿಲ್ಲೆ ರಾಜ್ಯದಲ್ಲಿ ನಂಬರ್ ಒನ್ :

ಸನ್ಮಾನ ಸ್ವೀಕರಿಸಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಒಂದು ವರ್ಷದಿಂದ ಗ್ಯಾರಂಟಿ ಯೋಜನೆಗಳು ಯಶ್ವಸಿಯಾಗಿ ಅನುಷ್ಟಾನಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆ ಗಳ ಮೇಲುಸ್ತುವಾರಿ ನೋಡಿಕೊಳ್ಳಲು ಸರ್ಕಾರ ರಾಜ್ಯ, ಜಿಲ್ಲೆ ತಾಲೂಕು ಸಮಿತಿ ಮಾಡಿದೆ. ಅದರಂತೆ ಜಿಲ್ಲೆಗೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.ಅದಕ್ಕಾಗಿ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಈ ಅಭಿನಂದನೆ ಸಲ್ಲಿಸಲಾಗುವುದು. ಅಧಿಕಾರಿಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಜಿಲ್ಲೆಯನ್ನು ರಾಜ್ಯದಲ್ಲಿ ನಂಬರ್ ಒನ್ ಆಗಿ ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಮಂಜುನಾಥ್, ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಎಸ್‌. ಜಯಣ್ಣ, ಚೂಡಾಧ್ಯಕ್ಷ ಮಹಮ್ಮದ್ಅಸ್ಗರ್, ಇತರರು ಭಾಗವಹಿಸಿದ್ದರು.

Share this article