ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಒತ್ತಾಯ

KannadaprabhaNewsNetwork | Published : Dec 2, 2024 1:18 AM

ಸಾರಾಂಶ

ಕುಡಿಯುವ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದರಿಂದ ವೆಂಕಟೇಶ್ವರ ನಗರದ ನಿವಾಸಿಗಳು ನೀರಿಗಾಗಿ ಹಾಹಾಕಾರ ಎದುರಾಗಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ಕುಡಿಯುವ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದರಿಂದ ವೆಂಕಟೇಶ್ವರ ನಗರದ ನಿವಾಸಿಗಳು ನೀರಿಗಾಗಿ ಹಾಹಾಕಾರ ಎದುರಾಗಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲಾ, ಸ್ಥಳೀಯ ನಿವಾಸಿಗಳಿಗೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪಡುತ್ತಿರುವ ಕಷ್ಟಕ್ಕೆ ಕೊನೆ ಇಲ್ಲದಂತಾಗಿದೆ. ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಮಾನಗಳಲ್ಲಿ ಪಟ್ಟಣ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದರು.

ಇದು ಇಂದು ನಿನ್ನೆಯ ಬವಣೆಯಲ್ಲ. ದಶಕಗಳಿಂದ ಈ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ನಿವಾಸಿಗಳ ಗೋಳು ತೋಡಿಕೊಳ್ಳುತ್ತಾರೆ. ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳು ರಾಜಧಾನಿಯಲ್ಲಿ ಸಭೆ ನಡೆಸಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ಎಂದು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಜನರ ನೀರಿನ ಸಮಸ್ಯೆ ಸ್ಥಳೀಯ ಪಟ್ಟಣ ಪಂಚಾಯತ ಅಧಿಕಾರಿಗಳು ಕಿವಿಗೊಡುತ್ತಿಲ್ಲ ಎಂದು ವೆಂಕಟೇಶ್ವನಗರದ ನಿವಾಸಿಗಳು ಅಧಿಕಾರಗಳ ಕಾರ್ಯವೈಖರಿಯ ಲೋಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಕುಡಿಯುವ ನೀರಿಗಾಗಿ ಜನತೆ ತೊಂದರೆ ಅನುಭವಿಸುವುದು ತಪ್ಪಿಲ್ಲ. ಶುದ್ಧ ನೀರಿಲ್ಲದ ಪ್ರಯುಕ್ತ ದೂರದಿಂದ ಹೋಗಿ ತರಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರೆದಿದೆ.

ಪಟ್ಟಣ ಪಂಚಾಯತಿಯಲ್ಲಿ ಹೆಚ್ಚುತ್ತಿರುವ ತೆರಿಗೆ ಬಗ್ಗೆ ಸಾರ್ವಜನಿಕರೂ ಬಹಳ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ತೆರಿಗೆಯನ್ನು ಕಡಿಮೆ ಮಾಡಲು ಸ್ಥಳೀಯರು ಮನವಿ ಮಾಡಿದ್ದಾರೆ ಎಂದು ತಿಳಿಯಲಾಗಿದೆ.

ಈ ವೇಳೆ ಡಿ.ಆರ್.ದಾಸರಡ್ಡಿ, ವಿಷ್ಣುಗೌಡ ಪಾಟೀಲ, ಸುರೇಶ ಕತ್ತಿ, ಬಸವರಾಜ ಉದಪುಡಿ, ರವಿ ಬೋಳಿಶೆಟ್ಟಿ, ಸೈಯದ ಜೀರಗಾಳ, ಸದಾಶಿವ ಹಗ್ಗದ, ಗಣೇಶ ಕುರಡೇಕರ, ಅನೀಲ ಬನ್ನೂರ, ಕೆ.ಎಸ್.ಬೂದಿಹಾಳ, ಎಚ್.ಆರ್.ಪಾಟೀಲ, ತಮ್ಮಣ್ಣಪ್ಪ ಬೆಳಕಲಿ ಇತರರು ಇದ್ದರು.

ಪಟ್ಟಣ ಪಂಚಾಯಿತಿ ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಆಲಿಸಿದ್ದಾರೆ. ಎರಡು ಮೂರು ದಿವಸದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದಿದ್ದಾರೆ.

ಬಸವರಾಜ ಉದಪುಡಿ, ವೆಂಕಟೇಶ್ವರ ನಗರದ ನಿವಾಸಿ

Share this article