ಕಾರಾಗೃಹಕ್ಕೆ ಎಡಿಜಿಪಿ ಅಲೋಕ್‌ ಕುಮಾರ ಭೇಟಿ

KannadaprabhaNewsNetwork |  
Published : Apr 18, 2026, 03:00 AM IST
ಜಮಖಂಡಿ ನಗರದ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್‌ ಕುಮಾರ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿದರು. | Kannada Prabha

ಸಾರಾಂಶ

ಜಮಖಂಡಿ ನಗರದ ಕೇಂದ್ರ ಕಾರಾಗ್ರಹಕ್ಕೆ ಎಡಿಜಿಪಿ ಅಲೋಕ್‌ ಕುಮಾರ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಕಾರಾಗೃಹಗಳ ಭೇಟಿ ಮಾಡುತ್ತಿದ್ದೇನೆ. ಯಾವುದೇ ಲೋಪಗಳಿರದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರದ ಕೇಂದ್ರ ಕಾರಾಗ್ರಹಕ್ಕೆ ಎಡಿಜಿಪಿ ಅಲೋಕ ಕುಮಾರ್‌ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಕಾರಾಗೃಹಗಳ ಭೇಟಿ ಮಾಡುತ್ತಿದ್ದೇನೆ. ಯಾವುದೇ ಲೋಪಗಳಿರದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಜಮಖಂಡಿಯ ಕಾರಾಗೃಹದಲ್ಲಿ ಯಾವುದೇ ಸಮಸ್ಯೆ ಇಲ್ಲ ಇಲ್ಲಿಯ ಅಧಿಕಾರಿಗಳು ಹಾಗೂ ಖೈದಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದೇನೆ. ಯಾವುದೇ ಸಮಸ್ಯೆಗಳಿಲ್ಲ. ಇನ್ನೂ ಉತ್ತಮವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾರಾಗೃಹ ಭದ್ರತಾ ವ್ಯವಸ್ಥೆ, ಸೌಲಭ್ಯಗಳು, ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಲಾಗಿದೆ. ಜೈಲುಗಳಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಕ್ಷೇತ್ರದಲ್ಲಿ ಮಕ್ಕಳ ಬಳಕೆ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ
ಅಂಚೆ ಕಚೇರಿ ವಿಲೀನ ವಿರೋಧಿಸಿ ಪ್ರತಿಭಟನೆ