ಅಧಿಕಮಾಸ, ಅಮಾವಾಸ್ಯೆ: ಮಲೆ ಮಾದೇಶ್ವರ ಬೆಟ್ಟದಲ್ಲಿ ಮಾದಪ್ಪನ ಭಕ್ತರ ದಂಡು

KannadaprabhaNewsNetwork |  
Published : May 18, 2026, 01:30 AM IST
17ಸಿಎಚ್‌ಎನ್‌55, 56, 57ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ಅಧಿಕಮಾಸ ವೀಕೆಂಡ್ ಭಾನುವಾರ ಹರಿದು ಬಂದ ಭಕ್ತ ಸಾಗರ. | Kannada Prabha

ಸಾರಾಂಶ

ಹರಕೆ ಹೊತ್ತ ಮಾದಪ್ಪನ ಭಕ್ತಾದಿಗಳಿಂದ ಧೂಪದ ಸೇವೆ, ಪಂಜಿನ ಸೇವೆ ಹಾಗೂ ಉರುಳು ಸೇವೆ ಸೇರಿ ವಿವಿಧ ಸೇವೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದೇಶ್ವರನಿಗೆ ಉಘೇ ಉಘೇ ಎಂದು ಜೈಕಾರಗಳನ್ನು ಕೂಗಿದರು.

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಶನಿವಾರ ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ ಅಪಾರ ಸಂಖ್ಯೆಯ ಭಕ್ತಾದಿಗಳು ಬೆಟ್ಟಕ್ಕೆ ಭೇಟಿ ನೀಡಿ, ಅಧಿಕಮಾಸ, ಅಮಾವಾಸ್ಯೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಿದರು. ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಹರಿದು ಬಂದ ಹಿನ್ನೆಲೆ ಸರತಿ ಸಾಲಿನಲ್ಲಿ ನಿಂತು ಮಾದಪ್ಪನ ದರ್ಶನ ಪಡೆದು ಪುನೀತರಾದರು. ಬಿಸಿಲ ಬೇಗೆ ಲೆಕ್ಕಿಸದೆ ಮಾದಪ್ಪನ ದರ್ಶನ ಮಾಡುತ್ತಿರುವ ಭಕ್ತಾದಿಗಳು ಹುಲಿವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಬಸವ ರಥ ಸೇರಿ ವಿವಿಧ ಉತ್ಸವಗಳಲ್ಲಿ ಪಾಲ್ಗೊಂಡರು, ಹರಕೆ ಹೊತ್ತ ಮಾದಪ್ಪನ ಭಕ್ತಾದಿಗಳಿಂದ ಧೂಪದ ಸೇವೆ, ಪಂಜಿನ ಸೇವೆ ಹಾಗೂ ಉರುಳು ಸೇವೆ ಸೇರಿ ವಿವಿಧ ಸೇವೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದೇಶ್ವರನಿಗೆ ಉಘೇ ಉಘೇ ಎಂದು ಜೈಕಾರಗಳನ್ನು ಕೂಗಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎತ್ತಿನಗಾಡಿ ಓಟ ನಮ್ಮ ಗ್ರಾಮೀಣ ಪ್ರದೇಶದ ಸೊಗಡಿನ ಸಂಸ್ಕೃತಿಯ ಪ್ರತಿಬಿಂಬ
ರೈತರ ಆರ್ಥಿಕ ಪ್ರಗತಿಗೆ ಕೈ ಜೋಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ