ಹಿರಿಯೂರು: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸೋಮವಾರ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರ ಪೀರ್‌ಸಾಬ್ ಮಾತನಾಡಿ, ಇಂದಿನಿಂದಲೇ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ತನ್ನು ಸಮರ್ಪಕವಾಗಿ ಪೂರೈಸಲು ಕ್ರಮಕೈಗೊಳ್ಳಲಾಗುತ್ತದೆ. ನೂತನವಾಗಿ ಆರಂಭವಾಗುತ್ತಿರುವ ಕೆಆರ್ ಹಳ್ಳಿ ಸಬ್‌ಸ್ಟೇಷನ್ ಇನ್ನು 10-12 ದಿನಗಳ ಒಳಗಾಗಿ ಪ್ರಾರಂಭವಾಗಲಿದ್ದು, ರೈತರ ಪಂಪ್‌ಸೆಟ್‌ಗಳಿಗೆ ಇನ್ನೂ ಹೆಚ್ಚಿನ ಗುಣಮಟ್ಟದ ವಿದ್ಯುತ್ ಸಿಗಲಿದೆ ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಉಪಾಧ್ಯಕ್ಷ ಅನ್ಸರ್ ಅಲಿ, ಆದಿವಾಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಂದಿಹಳ್ಳಿ ಶ್ರೀಧರ್, ಮಂಜುನಾಥ, ಸುಧಾಮ, ತಿಪ್ಪೇಸ್ವಾಮಿ, ಚಿನ್ನಸ್ವಾಮಿ, ಅಪ್ಪಿ ಶ್ರೀನಿವಾಸ್, ರಾಮಸ್ವಾಮಿ, ತಿಪ್ಪೇಸ್ವಾಮಿ, ರಂಗಸ್ವಾಮಿ ಮುಂತಾದ ರೈತರು ಭಾಗವಹಿಸಿದ್ದರು.