ಅಡ್ಕದಬಾಣೆ: ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

KannadaprabhaNewsNetwork |  
Published : Oct 17, 2024, 12:08 AM IST
ಚಿತ್ರ :  15ಎಂಡಿಕೆ2 : ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಿ.ವಿ.ಶ್ರೀನಾಥ್ ಮಾತನಾಡಿದರು. | Kannada Prabha

ಸಾರಾಂಶ

ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪೌಷ್ಟಿಕ ಆಹಾರ ಸೇವನೆಯ ಮಹತ್ವ, ರಕ್ತ ಹೀನತೆ ಮತ್ತು ನಿವಾರಣೆ, ಗರ್ಭಿಣಿ, ಬಾಣಂತಿ ಆರೈಕೆ, ಲಸಿಕಾ ಕಾರ್ಯಕ್ರಮ, ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದರು.

ಶಿಬಿರದಲ್ಲಿ ಮಡಿಕೇರಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಗಾಳಿಬೀಡು ಆಯುಷ್ಮಾನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆ ಕವಿತ ಹಾಜರಿದ್ದರು. ಆರೋಗ್ಯ ತಪಸಣಾ ಶಿಬಿರಕ್ಕೆ ಹಾಜರಾದ ಗ್ರಾಮಸ್ಥರಿಗೆ ಬಿಪಿ, ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು.

ಶ್ರೀನಿಧಿ, ತ್ರಿವೇಣಿ ಹಾಗೂ ಮಾಧುರಪ್ಪ ಸ್ವಸಹಾಯ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗಾಳಿಬೀಡು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಣಿ ಮುತ್ತಣ್ಣ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ವಂದಿಸಿದರು.(ಮಸ್ಟ್‌) ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಗುರುವಾರ ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಆರ್.ಭಾರತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಗುರುವಾರ ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಆರ್.ಭಾರತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು