ಮಕ್ಕಳ ಆರೋಗ್ಯಕ್ಕಾಗಿ ಪೋಲಿಯೋ ಹನಿ ಹಾಕಿಸಿ: ಮೋನಾ ರೋತ್

KannadaprabhaNewsNetwork |  
Published : Jun 29, 2026, 01:30 AM IST
28ಸಿಎಚ್ಎನ | Kannada Prabha

ಸಾರಾಂಶ

ಪಲ್ಸ್ ಪೋಲಿಯೋ ಅಭಿಯಾನವನ್ನು ಭಾರತದಲ್ಲಿ ೧೯೯೫ರಿಂದ ನಿರಂತರವಾಗಿ ರಾಷ್ಟ್ರೀಯ ಕಾರ್ಯಕ್ರಮವಾಗಿ ಆಯೊಜಿಸಲಾಗುತ್ತಿದೆ.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸಲಹೆಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಕ್ಕಳನ್ನು ಮಾರಕವಾಗಿ ಕಾಡುವ ಪೋಲಿಯೋ ರೋಗದಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬ ನಾಗರಿಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಲಹೆ ಮಾಡಿದರು.ತಾಲೂಕಿನ ಕುದೇರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪಲ್ಸ್ ಪೋಲಿಯೋ ಅಭಿಯಾನವನ್ನು ಭಾರತದಲ್ಲಿ ೧೯೯೫ರಿಂದ ನಿರಂತರವಾಗಿ ರಾಷ್ಟ್ರೀಯ ಕಾರ್ಯಕ್ರಮವಾಗಿ ಆಯೊಜಿಸಲಾಗುತ್ತಿದೆ. ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೋಲಿಯೋ ಹನಿಯಿಂದ ಮಕ್ಕಳ ಶಾಶ್ವತ ಅಂಗವಿಕಲತೆ ತಡೆಯಬಹುದಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಮಕ್ಕಳ ಉತ್ತಮ ಆರೋಗ್ಯ ಹಾಗೂ ಮುಂದಿನ ಭವಿಷ್ಯಕ್ಕಾಗಿ ಆಗತಾನೆ ಹುಟ್ಟಿದ ಮಗುವಿನಿಂದ ೫ ವರ್ಷದ ಎಲ್ಲಾ ಮಕ್ಕಳಿಗೂ ಪೋಲಿಯೊ ಹನಿ ಹಾಕಿಸಲು ಪೋಷಕರು ಮುಂದಾಗಬೇಕು ಎಂದು ಸಿ.ಇ.ಒ ಮೋನಾ ರೋತ್ ಅವರು ತಿಳಿಸಿದರು.ಆರೋಗ್ಯ ಮತ್ತು ಕುಟುಂಬ ಇಲಾಖೆಯ ಮೈಸೂರು ವಿಭಾಗೀಯ ಕಚೇರಿಯ ಉಪನಿರ್ದೇಶಕರಾದ ಡಾ. ಮಲ್ಲಿಕಾ ಅವರು ಮಾತನಾಡಿ, ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ ೧೯೯೫ರಿಂದ ಈ ವರೆಗೂ ಪ್ರತಿವರ್ಷ ೨-೩ ಬಾರಿ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತಿದೆ. ಜಾಗೃತಿ ಹಾಗೂ ಮುನ್ನೆಚ್ಚರಿಕೆಯೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಪೋಲಿಯೋ ರೋಗದಿಂದ ಮಕ್ಕಳನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕರು ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ಸಲಹೆ ಮಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಡಿಎಚ್‌ಒ ಡಾ. ಎಸ್. ಚಿದಂಬರ ಅವರು ದೇಶದಲ್ಲಿ ಆರಂಭದಿಂದ ಈವರೆಗೂ ಪೋಲಿಯೋ ನಿರ್ಮೂಲನೆ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದ್ದರ ಪರಿಣಾಮವಾಗಿ ಭಾರತ ಪೋಲಿಯೋ ಮುಕ್ತವಾಗಿದೆ. ಆದರೂ ನೆರೆಯ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ದೇಶಗಳಲ್ಲಿ ಈಗಲೂ ಜೀವಂತವಾಗಿದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು. ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್‌ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಕುದೇರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮ, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್‌ಕುಮಾರ್, ಆರೋಗ್ಯ ಇಲಾಖೆಯ ಲೆಕ್ಕಪತ್ರ ವ್ಯವಸ್ಥಾಪಕರಾದ ಹೇಮಂತ್‌ಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಅಂಗನವಾಡಿ ಮೇಲ್ವಿಚಾರಕರಾದ ಕಲಾವತಿ, ಗ್ರಾಮದ ಮುಖಂಡರಾದ ಆಶೋಕ್, ಮಧು, ರವಿ, ಪುಟ್ಟಶೆಟ್ಟಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

------------

28ಸಿಎಚ್ಎನ್‌15

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ಆಯೋಜಿಸಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಪಂ ಸಿಇಓ ಮೋನರೋತ್‌ ಅವರು ಚಾಲನೆ ನೀಡಿದರು.

-------

28ಸಿಎಚ್ಎನ್‌16

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ಆಯೋಜಿಸಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಪಂ ಸಿಇಓ ಮೋನರೋತಾ ಅವರು ಲಸಿಕೆ ಹಾಕಿದರು.

------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಿಯೋ ಮುಕ್ತ ದೇಶಕ್ಕೆ ಎಲ್ಲರ ಸಹಕಾರ ಅಗತ್ಯ
ಚುಟುಕು ಸಾಹಿತ್ಯ ಸಮಾಜಕ್ಕೆ ಮೌಲ್ಯಯುತ ಸಂದೇಶ ನೀಡುತ್ತದೆ