ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಲ್ಸ್ ಪೋಲಿಯೋ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಗು ಆರೋಗ್ಯವಾಗಿರಲು ಹಾಗೂ ಅಂಗ ನ್ಯೂನತೆಯಿಂದ ತಡೆಯಲು ಪೋಲಿಯೋ ಉಪಯುಕ್ತವಾಗಿದೆ ಎಂದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಸಂದೀಪ ಕಡ್ಲೇವಾಡ ಮಾತನಾಡಿ, ಆರೋಗ್ಯ ಕೇಂದ್ರದ ವ್ಯಾಪ್ತಿಯ 23 ಲಸಿಕಾ ಕೇಂದ್ರಗಳಲ್ಲಿ ಪೋಲಿಯೋ ಲಸಿಕೆ ವಿತರಿಸಿ ಸರ್ವ ಸಿದ್ಧತೆ ಮಾಡಲಾಗಿದೆ. 4938 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದರು.ಕರವೇ ತಾಲೂಕು ಘಟಕದ ಅಧ್ಯಕ್ಷ ರಹೀಮಾನ್ ಕನಕಲ್ ಮಾತನಾಡಿ, ದೇಶವನ್ನು ಸಂಪೂರ್ಣವಾಗಿ ಪೋಲಿಯೋ ಮುಕ್ತವನ್ನಾಗಿಸಲು ಸಾರ್ವಜನಿಕರು ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಲಸಿಕೆ ಬೂತ್‌ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ಸಂತೋಷ ಯಡಹಳ್ಳಿ, ಲಕ್ಷ್ಮೀಕಾಂತ ವಾಲಿ, ಪ್ರಭು ಚಿಗರಿ, ರಾಮನಗೌಡ, ಪ್ರವೀಣಕುಮಾರ ಉಪ್ಪಾರ, ಸುಕನ್ಯಾ ಚಳಗೇರಿ, ದಾನಮ್ಮ ಪಾಟೀಲ, ಹಸನಸಾಬ ನದಾಫ್, ಈರಣ್ಣ ಒಂಟೆತ್ತಿನ, ಮಲ್ಲಪ್ಪ ನಾಯ್ಕೋಡಿ, ಮದರಸಾಬ ಮಣ್ಣೂರ ಸೇರಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಇದ್ದರು.