ಹೂವಿನಹಡಗಲಿ: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಶಾಸಕ ಕೃಷ್ಣ ನಾಯ್ಕ ಹೇಳಿದರು.ತಾಲೂಕು ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ನೇಹಾ ಕೊಲೆ ಪ್ರಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾನವೀಯ ಮರೆತ ಈ ಘಟನೆಯನ್ನು ಸಮರ್ಥಿಸಿಕೊಂಡು ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ ಅಧಿಕಾರದಲ್ಲಿ ಮುಂದುವರೆಯಬಾರದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮಂಡಲ ಬಿಜೆಪಿ ಅಧ್ಯಕ್ಷ ಹಣ್ಣಿ ಶಶಿಧರ್, ಮುಖಂಡರಾದ ಎಂ.ಪರಮೇಶ್ವರಪ್ಪ, ವಾರದ ಗೌಸ್ ಮೋಹಿದ್ದಿನ್, ತೋಟನಾಯ್ಕ, ಕೆ.ಪತ್ರೇಶ, ಎಚ್. ಪೂಜಪ್ಪ, ಜೆಡಿಎಸ್ ಮುಖಂಡ ಕೆ.ಪುತ್ರೇಶ್, ಎಬಿವಿಪಿ ಸಂಘಟನೆಯ ಮುಖಂಡರು ಪ್ರತಿಭಟನೆಗೆ ಬೆಂಬಲ ಸೂಚಿಸಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.