ಕರಾಮುವಿ: ವಿವಿಧ ಕೋರ್ಸ್‌ಗಳಿಗೆ ಪ್ರವೇಶ

KannadaprabhaNewsNetwork |  
Published : Mar 28, 2025, 12:31 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ-ಎಂ.ಸಿ.ಜೆ., ಎಂ.ಲಿಬ್, ಐಎಸ್ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮಾ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಅವಕಾಶ ಪ್ರಾರಂಭವಾಗಿದೆ.

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ-ಎಂ.ಸಿ.ಜೆ., ಎಂ.ಲಿಬ್, ಐಎಸ್ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮಾ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಅವಕಾಶ ಪ್ರಾರಂಭವಾಗಿದೆ.

ಎರಡು ಶೈಕ್ಷಣಿಕ ಕೋರ್ಸ್‌ಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿದೆ. ವಿದ್ಯಾರ್ಥಿಗಳು ವೆಬ್‌ಸೈಟ್: ** www.ksoumysuru.ac.in ** ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶ ಪಡೆಯಬಹುದು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಅಲ್ಲದೇ, ಕೋವಿಡ್-19ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇದೆ.

ಹೆಚ್ಚಿನ ಮಾಹಿತಿಗಾಗಿ ಮೊ: 9844926125, 8971004272, 8310676181, 9902517906, 9008905457, 8747919317 ಇಲ್ಲಿಗೆ ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಜೆ.ಎಚ್. ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯ ಕಚೇರಿಯನ್ನು ಸಂಪರ್ಕಿಸಲು ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

- - -

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''