ಹಿರೇವಂಕಲಕುಂಟಾದಲ್ಲಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ ಯಲಬುರ್ಗಾಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಸ್ತು, ಶ್ರದ್ಧೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ನಿಮ್ಮ ಭವಿಷ್ಯ ಉಜ್ವಲಗೊಳ್ಳುತ್ತದೆ ಎಂದು ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಬಸವರಾಜ ತಳವಾರ ಹೇಳಿದರು.
ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಸಹಯೋಗದಲ್ಲಿ ಶುಕ್ರವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಅತ್ಯಾವಶ್ಯಕವಾಗಿದೆ ಎಂದು ಹೇಳಿದರು.ಗ್ರಾಮೀಣ ಭಾಗದಲ್ಲಿನ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿ, ಆರೋಗ್ಯ ವೃದ್ಧಿಸಿಕೊಳ್ಳಬೇಕು. ಕ್ರೀಡೆಯಿಂದ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಆಧುನಿಕ ಯುಗದಲ್ಲಿ ಜೀವನ ನಡೆಸುತ್ತಿದ್ದು, ಸದೃಢ ಆರೋಗ್ಯ ಹೊಂದಲು ಕ್ರೀಡಾ ಮನೋಭಾವನೆ ಅತ್ಯವಶ್ಯ. ಕೇವಲ ಪಠ್ಯಪುಸ್ತಕಕ್ಕೆ ಸೀಮಿತರಾಗದೇ ಆಟೋಟಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು ಎಂದು ಹೇಳಿದರು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಮರಪ್ಪ ಎಸ್. ಬೋಗಾಪೂರ ಮಾತನಾಡಿ, ಸೋಲು-ಗೆಲುವು ಎನ್ನದೇ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡಾಪಟುಗಳಿಗೆ ನಿರ್ಣಾಯಕರು ಪಾರದರ್ಶಕವಾದ ತೀರ್ಪು ನೀಡಬೇಕು ಎಂದರು.ಎಸ್‌ಡಿಎಂಸಿ ಅಧ್ಯಕ್ಷ ವಿರೂಪಣ್ಣ ಕೋರಿ ಧ್ವಜಾರೋಹಣ ನೇರವೇರಿಸಿದರು. ಗ್ರಾಪಂ ಉಪಾಧ್ಯಕ್ಷ ಮಂಜುನಾಥ ಹಿರೇಮಠ, ಸದಸ್ಯರಾದ ಆನಂದ ಈಳಿಗೇರ್, ಶಿವಮ್ಮ ಗಾಳೆಪ್ಪ ಓಜನಹಳ್ಳಿ, ನಿಂಗಪ್ಪ ತೊಣಸಿಹಾಳ್, ಹುಲಿಗೆಮ್ಮ ಬಾಲಪ್ಪ ಹರಿಜನ, ಕುಂಟೆಪ್ಪ ಚಿಣಿಗಿ, ಶರಣಪ್ಪ ಹರಿಜನ, ಶಂಕ್ರವ್ವ ಭೀಮನಗೌಡ ಕೋಳೂರು, ಸೋಮಲಿಂಗಪ್ಪ ಹರ್ಲಾಪುರ, ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ಸಜ್ಜನ್, ಗಾಳೆಪ್ಪ ಓಜನಹಳ್ಳಿ, ದೈಹಿಕ ಪರಿವೀಕ್ಷಕ ವೀರಭದ್ರಪ್ಪ ಅಂಗಡಿ, ಬಸವರಾಜ ಉಳ್ಳಾಗಡ್ಡಿ, ನಿವೃತ್ತ ಪ್ರಾಚಾರ್ಯ ಚಂದ್ರಕಾಂತಯ್ಯ ಕಲ್ಯಾಣಮಠ, ಉಪ ಪ್ರಾಚಾರ್ಯ ಬಾಬುಸಾಬ್ ಲೈನದಾರ್, ಎಸ್‌ಡಿಎಂಸಿ ಸದಸ್ಯ ಶಂಕರ ಸಾಹಕಾರ, ಮುಖಂಡ ಮಲ್ಲಣ್ಣ ಹರ್ಲಾಪುರ ಇದ್ದರು.