ಕನ್ನಡಪ್ರಭ ವಾರ್ತೆ ಪುತ್ತೂರು
ಗಾಂಧಿಕಟ್ಟೆ ಸಮಿತಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬುಧವಾರ ಬಸ್ ನಿಲ್ದಾಣದ ಬಳಿಯ ಗಾಂಧಿಕಟ್ಟೆಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ಗಾಂಧೀಜಿಯವರ ಅಹಿಂಸ್ಮಾತ್ಮ ನೀತಿ ವಿಶ್ವದಲ್ಲೇ ಖ್ಯಾತಿ ಪಡೆದಿದೆ. ಮಹಾತ್ಮ ಗಾಂಧೀಜಿಯವರ ತತ್ವ, ಆದರ್ಶಗಳು ಇಂದಿನಿ ಪೀಳಿಗೆಗೆ ಆದರ್ಶವಾಗಿದ್ದು ಅವರ ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಸಿಕೊಳ್ಳಬೇಕು. ದೇಶದ ಉದ್ಧಾರಕ್ಕಾಗಿ ಹಲವು ಯೋಜನೆಗಳನ್ನು ತಂದಿದ್ದರು. ಹಳ್ಳಿಗಳ ಉದ್ಧಾರ ಅವರ ಕನಸಾಗಿತ್ತು. ದೇಶವನ್ನು ಬಲಿಷ್ಠಗೊಳಿಸುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.ನಗರ ಠಾಣೆಯ ನಿರೀಕ್ಷಕ ಜಾನ್ಸನ್ ಡಿ ಸೋಜ ಮಾತನಾಡಿದರು. ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಮಾತನಾಡಿದರು.
ಗಾಂಧಿ ಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ವಂದಿಸಿದರು. ಚಂದ್ರಪ್ರಭಾ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸರ್ವಧರ್ಮ ದೀಪ ಬೆಳಗಿಸಿ, ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಗಾಂಧಿ ಭಜನೆ, ಸರ್ವಧರ್ಮ ಪ್ರಾರ್ಥನೆ ನೆರವೇರಿತು.