ಮಾದರಿ ಬದುಕಿಗೆ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Jan 13, 2026, 01:15 AM IST
12ಕೆಆರ್ ಎಂಎನ್ 11.ಜೆಪಿಜಿಹಿರಿಯ ಗಾಂಧಿವಾದಿ ಎಲ್. ನರಸಿಂಹಯ್ಯ ಅವರಿಗೆ ‘ಶಿಕ್ಷಣ ಕ್ಷೇತ್ರದ ಮರೆಯಲಾಗದ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ರಾಮನಗರ: ಜೀವನದಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕಬಹುದು ಎಂದು ಹಿರಿಯ ಗಾಂಧಿವಾದಿ ಎಲ್. ನರಸಿಂಹಯ್ಯ ಹೇಳಿದರು.

ರಾಮನಗರ: ಜೀವನದಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕಬಹುದು ಎಂದು ಹಿರಿಯ ಗಾಂಧಿವಾದಿ ಎಲ್. ನರಸಿಂಹಯ್ಯ ಹೇಳಿದರು.

ತಾಲೂಕಿನ ಕೈಲಾಂಚ ಹೋಬಳಿಯ ಕೃಷ್ಣಾಪುರದೊಡ್ಡಿಯಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಿಂಗಳ ಕಲಾ ಬೆಳಕು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ತಾವು ಮಾಡುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಬೇಕು. ಇದರಿಂದ ಸಮಾಜದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂದರು.

ನಾನು ಮುಖ್ಯಶಿಕ್ಷಕನಾಗಿ ಕಾರ್ಯ ನಿರ್ವಹಿಸಿ ನಿವೃತ್ತನಾಗಿದ್ದೇನೆ. ಶಿಕ್ಷಕರಲ್ಲಿ ಉತ್ತಮ ಸಮಾಜವನ್ನು ನಿರ್ಮಿಸುವ ಶಕ್ತಿಯಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯವನ್ನು ಬೋಧಿಸುವ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದು ತಿಳಿಸಿದರು.

ಗುರು ಹಿರಿಯರ ಮಾತು ನಮ್ಮ ಬದುಕಿಗೆ ಧೈರ್ಯ ಮತ್ತು ಬಲ ತಂದು ಕೊಡುತ್ತದೆ. ಆದರ್ಶ ಮಾರ್ಗದಲ್ಲಿ ಸಾಗಿದರೆ ಖಂಡಿತಾ ಜೀವನ ಇನ್ನಷ್ಟು ಖುಷಿಯಿಂದ ಕೂಡಿರುತ್ತದೆ. ಜ್ಞಾನಿಗಳ, ಹಿರಿಯರ ಮಾತುಗಳು ನಮಗೆ ನಮ್ಮ ಯಶಸ್ಸಿನ ಹಾದಿಯಲ್ಲಿ ಸಾಗಲು ನೆರವಾಗುತ್ತದೆ. ನಮಗೆ ದಾರಿ ತೋರುವ ಬೆಳಕಾಗಿ ಗಮನ ಸೆಳೆದವರಲ್ಲಿ ಗಾಂಧಿ ಕೂಡಾ ಒಬ್ಬರು. ಗಾಂಧೀಜಿ ವಿಚಾರಧಾರೆಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದರು.

ಗಾಂಧೀಜಿಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವರಿಗೆ ನೀಡುವ ನಿಜವಾದ ಗೌರವವಾಗಿದೆ. ಪ್ರತಿಯೊಬ್ಬರೂ ಶಿಸ್ತುಬದ್ಧ ಜೀವನ ನಡೆಸಿದರೆ, ಸಮಾಜದಲ್ಲಿ ಶಾಂತಿ, ಸೌಹಾರ್ಧತೆ ಮತ್ತು ಪ್ರಗತಿ ಸಾಧ್ಯವಾಗುತ್ತದೆ ಎಂದು ನರಸಿಂಹಯ್ಯ ತಿಳಿಸಿದರು.

ಶಾಂತಲಾ ಚಾರಿಟಬಲ್ ಟ್ರಸ್ಟಿನ ಸಂಸ್ಥಾಪಕ ಕಾರ್ಯದರ್ಶಿ ಕವಿತಾರಾವ್ ಮಾತನಾಡಿ, ಎಲ್. ನರಸಿಂಹಯ್ಯ ಅವರು ಹಿರಿಯ ಗಾಂಧಿವಾದಿಗಳಾಗಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶಿಕ್ಷಕರು ಹೇಗಿರಬೇಕು ಎಂಬುದಕ್ಕೆ ಇವರು ಉದಾಹರಣೆಯಾಗಿದ್ದು, ಇತರರಿಗೆ ಮಾದರಿಯಾಗುವಂತಹ ಜೀವನವನ್ನು ನಡೆಸಿದ್ದಾರೆ, ಎಂದು ತಿಳಿಸಿದರು.

ಪ್ರಸ್ತುತ ಸನ್ನಿವೇಶದಲ್ಲಿ ಸಮಸಮಾಜಕ್ಕಾಗಿ ದುಡಿದ ಮಹನೀಯರ ವಿಚಾರಾಧಾರೆಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕೆಲಸ ನಡೆಯಬೇಕಿದೆ. ಯುವ ಸಮುದಾಯ ಓದಿಗೆ ಸೀಮಿತವಾಗದೆ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಮಾದರಿಯಾಗಿ ಬದುಕು ರೂಪಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಶಿಕ್ಷಕ ಹಾಗೂ ಹಿರಿಯ ಗಾಂಧಿವಾದಿ ಎಲ್. ನರಸಿಂಹಯ್ಯ ಅವರಿಗೆ ‘ಶಿಕ್ಷಣ ಕ್ಷೇತ್ರದ ಮರೆಯಲಾಗದ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಯಕಿ ಚಿತ್ರಾರಾವ್ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

ಹಾರೋಹಳ್ಳಿಯ ವಿದ್ಯಾಸಂಸ್ಥೆಯ ಕೋಶಾಧಿಕಾರಿ ಎಂ.ವಿ. ಶ್ರೀನಿವಾಸನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ. ಲಕ್ಷ್ಮೀಕಾಂತ್, ನಿವೃತ್ತ ವೈದ್ಯಾಧಿಕಾರಿ ಡಾ.ಎನ್.ಜಿ. ರವಿಕುಮಾರ್, ಡಾ.ಎನ್. ಪುರುಷೋತ್ತಮ್, ನಿವೃತ್ತ ಮುಖ್ಯಶಿಕ್ಷಕರಾದ ವಿ. ರಾಜು, ಮೊಹಮದ್ ಯಾಕೂಬ್ ಪಾಷಾ, ನಿವೃತ್ತ ಆರೋಗ್ಯಾಧಿಕಾರಿ ಟಿ.ಕೆ. ಆಂಜನಪ್ಪ, ವಿವೇಕಾನಂದ ಯೋಗಾಶ್ರಮದ ಸಂಸ್ಥಾಪಕ ಜಿ.ಎ. ಚಂದ್ರಶೇಖರ್, ಶಿಕ್ಷಕ ರಾಜಶೇಖರ್ ಉಪಸ್ಥಿತರಿದ್ದರು.

12ಕೆಆರ್ ಎಂಎನ್ 11.ಜೆಪಿಜಿ

ಹಿರಿಯ ಗಾಂಧಿವಾದಿ ಎಲ್. ನರಸಿಂಹಯ್ಯ ಅವರಿಗೆ ‘ಶಿಕ್ಷಣ ಕ್ಷೇತ್ರದ ಮರೆಯಲಾಗದ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ