ಕುಷ್ಟಗಿ: ದಾಸ ಸಾಹಿತ್ಯದಲ್ಲಿ ತಮ್ಮದೇ ಆದ ಸನ್ಮಾರ್ಗ ನೀಡಿದ ಮಹಾನ್ ನಾಯಕ ಕನಕದಾಸರು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.ಪಟ್ಟಣದ ಗಜೇಂದ್ರಗಡ ರಸ್ತೆಯಲ್ಲಿರುವ ಕನಕದಾಸ ವೃತ್ತದಲ್ಲಿ ಕನಕದಾಸರ ಕಂಚಿನ ಪುತ್ತಳಿಯನ್ನು ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಿಂಥಣಿ ಕನಕ ಗುರುಪೀಠದ ಸಿದ್ದರಾಮನಂದಪುರಿ ಸ್ವಾಮಿಗಳು, ಬಾದಿಮನಾಳದ ಶಿವಸಿದ್ದೇಶ್ವರ ಸ್ವಾಮಿಗಳು, ಮದ್ದಾನೇಶ್ವರ ಮಠದ ಕರಿಬಸವ ಶಿವಾಚಾರ್ಯ ಸ್ವಾಮಿಗಳು, ಅಭಿನವ ಕರಿಬಸವ ಶಿವಾಚಾರ್ಯರು, ಶಿವಾನಂದಯ್ಯ ಗುರುವಿನ, ಶರಣಯ್ಯ ಗುರುವಿನ, ಮಾಜಿ ಶಾಸಕ ಕೆ ಶರಣಪ್ಪ ವಕೀಲರು, ರವಿಕುಮಾರ ಸ್ವಾಮಿ ಹಿರೇಮಠ, ಬಸವರಾಜ ಹಳ್ಳೂರು, ಮಲ್ಲಣ್ಣ ಪಲ್ಲೆದ, ಅಮರೇಶ್ವರ ಶೆಟ್ಟರ, ಪರಸಪ್ಪ ಕತ್ತಿ, ಪಕೀರಪ್ಪ ವಕೀಲರು, ಕಲ್ಲೇಶ ತಾಳದ, ನಟರಾಜ ಸೋನಾರ್ ಸೇರಿದಂತೆ ಇತರರು ಇದ್ದರು.