ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಸಿದ್ಧಾಂತ ಮತ್ತು ಮೌಲ್ಯ ಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಬದುಕು ಕಟ್ಟಿ ಕೊಳ್ಳಬಹುದು ಎಂದರು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಕೊಡುಗೆ ಅನನ್ಯ, ಕನ್ನಡದ ಪ್ರತಿಯೊಬ್ಬ ಕವಿಗಳು ಆಯಾ ಕಾಲದ ಜನಮಾನಸಕ್ಕೆ ತಕ್ಕಂತೆ ಸೂಕ್ತವಾದ ಸಾಹಿತ್ಯ ರಚನೆಯಲ್ಲಿ ತೊಡಗಿ ಇಡೀ ವಿಶ್ವಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ವ್ಯಕ್ತಿಗಳ ಮಹಾನ್ ಕವಿಗಳ ಸಾಲಿನಲ್ಲಿ ನಮ್ಮ ಪ್ರೀತಿಯಕುವೆಂಪು ವಿರಾಜಮಾನ ರಾಗಿದ್ದಾರೆ ಎಂದು ಬಣ್ಣಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ .ಬಿ.ಧನಂಜಯ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ತಮ್ಮ ವಿಶ್ವಮಾನವ ಸಂದೇಶದ ಮೂಲಕ ಮನುಷ್ಯ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಕುವೆಂಪು ವೈಚಾರಿಕ ಸಂದೇಶ ಅನುಸರಿಸಿ: ಮಂಜುನಾಥ್
ಹಲಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ದಿನಾಚರಣೆಯಲ್ಲಿ ಮಾತನಾಡಿ, ವಿಶ್ವ ಮಾನವ ಎಂದು ಖ್ಯಾತಿ ಪಡೆದ ಕುವೆಂಪು ಅವರ ಸಾಹಿತ್ಯ ಕೃತಿಗಳಲ್ಲಿ ಜೀವನ ಮೌಲ್ಯಗಳು ಅಡಗಿವೆ. ತಮ್ಮ ಅದ್ಭುತ ಚಿಂತನೆ ವಿಚಾರ ಧಾರೆಗಳನ್ನು ಬರಹಗಳ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ನೀಡಿ ಅಜಾರಮರವಾಗಿ ಉಳಿದಿದ್ದಾರೆ ಎಂದು ಸ್ಮರಿಸಿದರು.