ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ತೆಂಗು ಅಭಿವೃದ್ಧಿ ಮಂಡಳಿ ಪ್ರಾಯೋಜಿತ ಸಂಯೋಜಿತ ಬೇಸಾಯ ಯೋಜನಡಿ ಪ್ರಾತ್ಯಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೃಷಿ ಚಟುವಟಿಕೆಯಲ್ಲಿ ಅಧಿಕ ಪ್ರಮಾಣದ ನೀರನ್ನು ಬಳಕೆ ಮಾಡಿ ಬೆಳೆ ಬೆಳೆಯುತ್ತಾರೆ. ರೈತರು ಅಧಿಕಾರಿಗಳ ಜತೆ ಚರ್ಚೆ ಮಾಡಿ ನೀರನ್ನು ಕಡಿಮೆ ಪ್ರಮಾಣದಲ್ಲಿ ಬಳಸಿ ಹನಿ ನೀರಾವರಿ ಯೋಜನೆ ಮೂಲಕ ಭೂಮಿ ಫಲವತ್ತತೆ ಮತ್ತು ಸಾರಾಂಶಗಳನ್ನು ಕಾಪಾಡಿಕೊಂಡು ಹೆಚ್ಚಿನ ಲಾಭ ತರುವಂತೆ ಕಿವಿಮಾತು ಹೇಳಿದರು.ಮಂಡ್ಯ ಜಿಲ್ಲೆಯಲ್ಲಿ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಅನುದಾನ ನೀಡಲಾಗಿದೆ. ಕೃಷಿ ಸಚಿವರು ಜಿಲ್ಲೆಯವರೆ ಆಗಿದ್ದು, ಕೃಷಿ ಚಟುವಟಿಕೆಗೆ ಅನುಗುಣವಾಗಿ ಸರ್ಕಾರದಿಂದ ಸಿಗುವ ಸವಲತ್ತು ಹಾಗೂ ಸಬ್ಸಿಡಿ ಸಮರ್ಪಕವಾಗಿ ಬಳಸಿಕೊಂಡು ತಾಂತ್ರಿಕ ವಸ್ತುಗಳನ್ನು ಖರೀದಿಸಿ ಯಾಂತ್ರಿಕ ಬೇಸಾಯ ಕ್ರಮ ಅನುಸರಿಸುವಂತೆ ಸಲಹೆ ನೀಡಿದರು.
ರೈತರು ತೆಂಗಿನ ಬೆಳೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ತೆಂಗು ಬೆಳೆಯಲ್ಲಿ ಮತ್ತಷ್ಟು ಉತ್ತೇಜನ ದೊರೆತು ರೈತರಿಗೆ ಉತ್ತಮ ಇಳುವರಿ ಪಡೆಯಲು ಸಹಕಾರಿಯಾಗಲಿದೆ ಎಂದರು.
ಜಿಲ್ಲೆಯ ಹಾಗೂ ತಾಲೂಕಿನ ಜನತೆ ತೆಂಗು ಬೆಳೆಗೆ ಹೆಚ್ಚಿನ ಮಹತ್ವ ನೀಡಬೇಕು ಹಾಗೆಯೇ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ತೆಂಗಿನ ಬೆಳೆಗೆ ಹೆಚ್ಚಿನ ಸವಲತ್ತು ನೀಡಲಾಗುವುದು ಎಂದರು.
ಈ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ಹಿರಿಯ ತೋಟಗಾರಿಕೆ ಇಲಾಖೆ ನಿರ್ದೇಶಕಿ ರೇಖಾ, ಗ್ರಾಪಂ ಸದಸ್ಯ ಗುಡಿಗೆರೆ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.