ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.
ಸಂತ ಸೇವಾಲಾಲ್ ತಮ್ಮ ಜೀವನವನ್ನು ಸಮಾಜದ ಅಭಿವೃದ್ಧಿಗೆ ಮುಡಿಪಾಗಿಟ್ಟಿದ್ದರು. ತಮ್ಮ ವಿಚಾರಧಾರೆಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದರು. ಜೊತೆಗೆ ಸೇವಾಲಾಲ್‌ರು ಪ್ರಕೃತಿ ಆರಾಧಕರಾಗಿದ್ದರು. ಪ್ರಕೃತಿಯನ್ನು ಸಂರಕ್ಷಿಸುವ ಕುರಿತು ಅನೇಕ ಸಂದೇಶಗಳನ್ನು ಸಮಾಜಕ್ಕೆ ನೀಡಿದರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯದ ಸಹಾಯಕ ನಿರ್ದೇಶಕ ತಿಪ್ಪಣ್ಣ ನಾಯಕ ಉಪನ್ಯಾಸ ನೀಡಿ, ಮಹಿಳೆಯರನ್ನು ಸಮಾನತೆಯ ಹಾದಿಗೆ ತಂದು, ಮೌಡ್ಯತೆಯಲ್ಲಿರುವ ಜನರನ್ನು ತಮ್ಮ ಜೀವನ ಸಂದೇಶಗಳ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಸಂತ ಸೇವಾಲಾಲ್‌ರ ಪಾತ್ರ ಅಪಾರವಾದದ್ದು ಎಂದು ಹೇಳಿದರು.
ಸಂತ ಸೇವಾಲಾಲ್ ಭಾವಚಿತ್ರ ಮೆರವಣಿಗೆ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಬಸವೇಶ್ವರ ವೃತ್ತದಲ್ಲಿ ಸಂತ ಸೇವಾಲಾಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ವಿವಿಧ ಕಲಾ ತಂಡಗಳೊಂದಿಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದವರೆಗೆ ಆಗಮಿಸಲಾಯಿತು. ಮೆರವಣಿಗೆಯಲ್ಲಿ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಡಾ.ಶಿವಕುಮಾರ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಮಾಜದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.