ಕನ್ನಡಪ್ರಭ ವಾರ್ತೆ ನಿಡಗುಂದಿ
ನಿಜಶರಣೆ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಮಿತಿಯವರು ಹಮ್ಮಿಕೊಂಡ ಹೇಮರಡ್ಡಿ ಮಲ್ಲಮ್ಮಳ 602ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹೇಮರಡ್ಡಿ ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರು ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ವೇಳೆ ಈರಣ್ಣ ಬಿಸಿರೊಟ್ಟಿ, ಭೀಮನಗೌಡ ಪಾಟೀಲ, ರವಿಪ್ರಸಾದ ರೆಡ್ಡಿ, ರವಿ ಕುಳಗೇರಿ, ರಾಜು ದೊಡಮನಿ, ನಿಂಗನಗೌಡ್ರ, ವಿರೇಶ ಅಡಕಿ ಸೇರಿದಂತೆ ಇತರರಿದ್ದರು.