ಮಹಾತ್ಮ ಗಾಂಧೀಜಿಯವರ ಆದರ್ಶ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Oct 03, 2024, 01:23 AM IST
ಚಿತ್ರ 2ಬಿಡಿಆರ್50 | Kannada Prabha

ಸಾರಾಂಶ

ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಹಾತ್ಮ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ರಾಷ್ಟ್ರಪೀತ ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸತ್ಯ ಮತ್ತು ಸರಳತೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ್‌ ಇವರ ಸಹಯೋಗದಲ್ಲಿ ನಡೆದ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಶಾಂತಿಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು ನುಡಿದಂತೆ ನಡೆದ ಮಹಾತ್ಮರು, ಹಾಗಾಗಿ ಅವರನ್ನು ನಾವು ರಾಷ್ಟ್ರಪಿತ ಎಂದು ಕರೆಯುತ್ತೇವೆ ಎಂದರು.

ಆರ್.ವಿ.ಬಿಡಪ ಕಾನೂನು ಮಹಾವಿದ್ಯಾಲಯ ಬೀದರ್‌ ಸಹಾಯಕ ಪ್ರಾಧ್ಯಾಪಕರಾದ ಗಣಪತಿ ಟಿ.ಅವರು ಗಾಂಧೀಜಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸ್ವಚ್ಛತೆಯ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೋದಿಸಿದರು. ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ವತಿಯಿಂದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ನಗರದಲ್ಲಿ ಬೆಳಗ್ಗೆ ಸ್ವಚ್ಛತಾ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಎಡಿಸಿ ಶಿವಕುಮಾರ ಶೀಲವಂತ, ಬೀದರ್ ಸಹಾಯಕ ಆಯುಕ್ತರಾದ ಮಹಮ್ಮದ ಶಕೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಯೋಜನಾ ನಿರ್ದೇಶಕ ಮೋತಿಲಾಲ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸುರೇಶ ಜಿ. ಡಿಸಿ ಕಚೇರಿಯ ಕಿರಣಕುಮಾರ, ಶ್ರೀಕಾಂತ, ವಾರ್ತಾ ಇಲಾಖೆಯ ವಿಜಯಕೃಷ್ಣ, ನರೇಶ, ತನ್ವೀರ, ಗೀತಮ್ಮ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಜ ಕೃಷಿ; ಆನಂದಮಯ ಜೀವನಕ್ಕೆ ದಾರಿ ಕುರಿತು 3 ದಿನಗಳ ತರಬೇತಿ
ಸಿದ್ದರಾಮಯ್ಯ ಪರ, ವಿರುದ್ಧ ಡಿನ್ನರ್ ಮೀಟಿಂಗ್‌ಗೆ ಸೀಮಿತ