ಕನ್ನಡಪ್ರಭ ವಾರ್ತೆ ಗೋಕಾಕ
ಮಂಗಳವಾರ ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಂದು ಕ್ಷಣ ಅತ್ಯಂತ ಮುಖ್ಯವಾಗಿದ್ದು, ಅದರ ಸದುಪಯೋಗ ಪಡೆದುಕೊಂಡು ಉತ್ತಮ ಪ್ರಜೆಗಳಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ನಾಡಿನ ಸಕಲ ಮಹಾನ್ ಪುರುಷರ ತತ್ವಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಅವರಂತಾಗಲು ಪ್ರಯತ್ನಶೀಲರಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಹಲವಾರು ಕಷ್ಟಗಳು ಬರುತ್ತವೆ. ಅವುಗಳನ್ನು ಮೆಟ್ಟಿ ನಿಂತು ಸಾಧನೆ ಮೂಲಕ ಸದೃಢ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತು ಟಿ.ಬಿ.ಬಿಲ್. ಉಪನ್ಯಾಸ ನೀಡಿದರು. ವಸತಿ ನಿಲಯದಲ್ಲಿ ಓದುತ್ತಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಿ, ಗೌರವಿಸಲಾಯಿತು.
ಉದಯಕುಮಾರ ಕಾಂಬ್ಳೆ, ಪೌರಾಯುಕ್ತ ರಮೇಶ ಜಾಧವ, ಶಿವಾನಂದ ಬಬಲಿ, ಫಕ್ಕಿರಪ್ಪ ಮೇಟಿ, ಎಸ್.ಪಿ. ವರಾಳೆ, ಡಿ.ಎಸ್. ಕುಡವಕ್ಕಲಿಗ, ಅಮೃತ ದಪ್ಪಿನವರ, ಬಿ.ಎ. ಮಾಲದಿನ್ನಿ, ಪಿ.ಆರ್. ಬೆವಿನಗಿಡದ, ಉಪಸ್ಥಿತರಿದ್ದರು.