ಸ್ವಾಮಿ ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿ

KannadaprabhaNewsNetwork | Published : Jan 17, 2025 12:49 AM

ಸಾರಾಂಶ

ಯುವಜನಾಂಗ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭಾರತ ಕಟ್ಟುವಲ್ಲಿ ಪಾತ್ರ ವಹಿಸಬೇಕು.

ಬಳ್ಳಾರಿ; ಯುವಜನಾಂಗ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭಾರತ ಕಟ್ಟುವಲ್ಲಿ ಪಾತ್ರ ವಹಿಸಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್. ರುದ್ರೇಶ್ ಹೇಳಿದರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ಭವನ ಆವರಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕದಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚಾರಣೆಯ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಪುಷ್ಪರ್ಚಾನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೇಶದ ಸಂಪತ್ತು ಎಂದರೆ ಯುವಕರು. ದುಶ್ಚಟಗಳ ಮೋರೆ ಹೋಗುವುದನ್ನು ಬಿಟ್ಟು ಯುವಕರು ವಿವೇಕಾನಂದರ ತತ್ವಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ವೈಚಾರಿಕ ಮತ್ತು ಆಧ್ಯಾತ್ಮಿಕ ವಿಚಾರಗಳು ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ಮಾನವೀಯತೆ ವಿಕಾಸ. ಯುವಕರು ದೇಶವನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದರು.

ಮುಖ್ಯಅತಿಥಿಯಾಗಿದ್ದ ವಿವಿಯ ಸಹ ಪ್ರಾಧ್ಯಾಪಕ ಡಾ.ಎಚ್. ತಿಪ್ಪೇಸ್ವಾಮಿ ಮಾತನಾಡಿ, ಅಪರೂಪದ ಜನನ ಶ್ರೇಷ್ಠ ವ್ಯಕ್ತಿ. ಹಿಂದೂ ಧರ್ಮದ ತತ್ವಗಳನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿ, ಅದರಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡಿ ದೇಶ ಆಭಿವೃದ್ಧಿ ಪಡಿಸುವುದು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಂತಹ ಶಕ್ತಿ ಯವಕರಲ್ಲಿದೆ ಎಂದು ಹೇಳಿದರು.

ವಿದ್ಯಾರ್ಥಿ ಕಲ್ಯಾಣ ಘಟಕದ ನಿದೇರ್ಶಕರಾದ ಡಾ.ಶಶಿಕಾಂತ್ ಎಚ್. ಮಜಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶ್ವವಿದ್ಯಾಲಯದ ಸಮಾಜಶಾಸ್ತ್ರದ ಸಹ ಪ್ರಾಧ್ಯಾಪಕ ಡಾ.ಕುಮಾರ್, ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕಡಗಿ ಉದಯಕುಮಾರ, ವಾಣಿಜ್ಯಶಾಸ್ತ್ರದ ಅಧ್ಯಯನ ವಿಭಾಗದ ಡಾ.ಪ್ರೊ. ಸದ್ಯೋಜಾತಪ್ಪ, ಸಹ ಪ್ರಾದ್ಯಾಪಕ ಡಾ.ಜಿಲಾನ್ ಬಾಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಅರುಣಕುಮಾರ ಲಗಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ಭವನ ಆವರಣದಲ್ಲಿ ಜರುಗಿದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚಾರಣೆಯಲ್ಲಿ ಕುಲಸಚಿವ ಎಸ್.ಎನ್ ರುದ್ರೇಶ್ ಮಾತನಾಡಿದರು.

Share this article