ಕಾಯಕವೇ ಕೈಲಾಸ ತತ್ವ ಅಳವಡಿಸಿಕೊಳ್ಳಿ: ನಿಂಗನಗೌಡ

KannadaprabhaNewsNetwork |  
Published : May 02, 2026, 02:30 AM IST
ಪೋಟೊ1ಕೆಎಸಟಿ1: ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಪ್ರತಿ ಕುಟುಂಬಕ್ಕೂ ಕಡ್ಡಾಯವಾಗಿ ಕೆಲಸ ನಿರ್ವಹಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು

ಕುಷ್ಟಗಿ: ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಕಾಯಕದಲ್ಲಿ ತೊಡಗಬೇಕು ಎಂದು ತಾಪಂ ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಹೇಳಿದರು.

ತಾಲೂಕಿನ ಕ್ಯಾದಿಗುಪ್ಪ ಗ್ರಾಪಂ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2027-28 ನೇ ಸಾಲಿನ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಐಇಸಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಕೆಲಸ ಮಾಡಿ ಕೈಲಾಸ ಕಾಣಬೇಕು ಎಂದು ಬಸವಣ್ಣನವರು ಹೇಳಿದ್ದಾರೆ ಅವರ ಆಶಯದಂತೆ ನರೇಗಾ ಯೋಜನೆಯಡಿ ಕೆಲಸ ಮಾಡುವ ಅಕುಶಲ ಕೂಲಿಕಾರರು ಬಸವಣ್ಣನವರ ತತ್ವ ಪಾಲನೆ ಮಾಡಿಕೊಂಡು ಹೋಗಬೇಕು. ಪ್ರತಿ ಕುಟುಂಬಕ್ಕೂ ಕಡ್ಡಾಯವಾಗಿ ಕೆಲಸ ನಿರ್ವಹಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಗ್ರಾಪಂದಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಹಿರಿಯ ಕೂಲಿ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾಶ್ರೀ, ತಾಪಂ ಐಇಸಿ ಸಂಯೋಜಕ ಚಂದ್ರಶೇಖರ ಜಿ.ಹಿರೇಮಠ, ಗ್ರಾಪಂ ಸಿಬ್ಬಂದಿ ಜಾಫರ್,ಅಂಬಿಕಾ ಗದ್ದಿ, ಶರಣಪ್ಪ ತಳವಾರ, ಬಸವರಾಜ್ ಚಳಿಗೇರಿ ಹಾಗೂ ಕಾಯಕ ಬಂಧು ಗ್ಯಾನಪ್ಪ ಮೆಂಟಿಗೇರಿ, ಬಾಲಪ್ಪ ಕರೆಗುಡ್ಡ, ರಾಜಾಸಾಬ್, ಊರಿನ ಗುರು ಹಿರಿಯರು ಮತ್ತು 100ಕ್ಕೂ ಹೆಚ್ಚು ಜನ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಕಾರ್ಮಿಕ ಶ್ರಮ ಆಧಾರ
ಬಿಎಸ್‌ವೈ ಅಭಿಮಾನೋತ್ಸವ ಯಶಸ್ವಿಗೊಳಿಸಿ: ಜಿ.ಕರುಣಾಕರ ರೆಡ್ಡಿ