ವಾಲ್ಮೀಕಿ ನೀಡಿರುವ ಮೌಲ್ಯ ಅಳವಡಿಸಿಕೊಳ್ಳಿ: ಎಸ್.ವಿ.ಲೋಕೇಶ್

KannadaprabhaNewsNetwork |  
Published : Oct 27, 2026, 02:00 AM IST
26ಕೆಎಂಎನ್ ಡಿ17 | Kannada Prabha

ಸಾರಾಂಶ

ನಾಡಿಗೆ ರಾಮಾಯಣ ಮಹಾಕಾವ್ಯವನ್ನು ನೀಡಿದ ವಾಲ್ಮೀಕಿ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೇ ಅವರ ಹಿರಿಮೆಯನ್ನು ಸ್ಮರಿಸಿಕೊಳ್ಳುವುವ ಜೊತೆಗೆ ಅವರ ಸಾಹಿತ್ಯವನ್ನು ಓದಿ ಅರ್ಥೈಸಿಕೊಂಡು ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಒಳ್ಳೇಯ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮಹರ್ಷಿ ವಾಲ್ಮೀಕಿ ನೀಡಿರುವ ಧರ್ಮ, ಸತ್ಯ, ಕರುಣೆ ಹಾಗೂ ಜ್ಞಾನದ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿ, ಮಾನವ ಕುಲಕ್ಕೆ ತನ್ನದೇ ಆದ ಕೊಡುಗೆ ನೀಡಿದ ಮಹಾನ್ ಚೇತನ ವಾಲ್ಮೀಕಿ ಅವರ ಜೀವನ ಚರಿತ್ರೆ ತಿಳಿದುಕೊಳ್ಳಬೇಕೆಂದರು.

ನಾಡಿಗೆ ರಾಮಾಯಣ ಮಹಾಕಾವ್ಯವನ್ನು ನೀಡಿದ ವಾಲ್ಮೀಕಿ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೇ ಅವರ ಹಿರಿಮೆಯನ್ನು ಸ್ಮರಿಸಿಕೊಳ್ಳುವುವ ಜೊತೆಗೆ ಅವರ ಸಾಹಿತ್ಯವನ್ನು ಓದಿ ಅರ್ಥೈಸಿಕೊಂಡು ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಒಳ್ಳೇಯ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ಮಾತನಾಡಿ, ಭಾರತೀಯ ಸಂಸ್ಕೃತಿ ಪ್ರತೀಕವಾಗಿರುವ ರಾಮಾಯಣದಂಥ ಮಹಾಕಾವ್ಯವನ್ನು ದೇಶಕ್ಕೆ ಕೊಟ್ಟಿದ ವಾಲ್ಮೀಕಿ ಅವರ ಅಪಾರ ಜ್ಞಾನರ್ಜನೆ ಪ್ರಸ್ತುತದಲ್ಲಿಯೂ ಸ್ಫೂರ್ತಿಯಾಗಿದೆ. ನೂರಾರು ವರ್ಷಗಳ ಹಿಂದೆ ರಾಮಾಯಣ ಮಹಾ ಕಾವ್ಯ ಇಂದಿಗೂ ಶ್ರೇಷ್ಠತೆಯನ್ನು ಪಡೆದಿರುವುದು ಸಾಹಿತ್ಯಕ್ಕೆ ಇರುವ ಶಕ್ತಿಯಾಗಿದೆ.

ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದು ಸ್ಮರಿಸಿದರು.

ಸಮಾಜಕ್ಕೆ ಜ್ಞಾನ, ಸಮಾನತೆ, ಜಾಗೃತಿ ನೀಡಲು ಬುದ್ಧ, ಬಸವ, ಅಂಬೇಡ್ಕರ್‌ರಂತಹ ಮಹಾನ್ ನಾಯಕರು ಶ್ರಮಿಸಿದ್ದಾರೆ. ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿ ಬದುಕು ಒಂದು ಉತ್ತಮ ನಿದರ್ಶನವಾಗಿದೆ. ಸಾಧಕರ ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ಧೆಶಕ ಎಸ್.ಸಂತೋಷ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಲೋಕೋಪಯೋಗಿ ಇಲಾಖೆ ಎಇಇ ಎ.ಎಂ.ಸೋಮಶೇಖರ್, ಸಿಪಿಐ ಎಸ್.ಜಯಾನಂದ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು, ರವಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು