ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ರಬಕವಿ ನಗರದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ರಬಕವಿ-ಬನಹಟ್ಟಿ ತಾಲೂಕು ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹ ನಿಮಿತ್ತ ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಪ್ರಕ್ರಿಯೆಗಳು ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪೂರಕ ಎಂಬ ವಿಷಯಾಧಾರಿತ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಜಮಖಂಡಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮುಖ್ಯಸ್ಥ ಎಚ್. ಕೆ. ದೊಡಸಿನ್ನವರ ಮಾತನಾಡಿ, ಸಹಕಾರ ಕ್ಷೇತ್ರ ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡಾಗ ಮಾತ್ರ ಜನರಿಗೆ ಇನ್ನಷ್ಟು ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ಸಹಕಾರದ ಮೂಲ ಆಶಯಗಳನ್ನು ಉಳಿಸಿಕೊಂಡು ಆಧುನಿಕ ವ್ಯವಸ್ಥೆಗಳೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.ರಬಕವಿ ನಗರದ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ಎಲ್ಲ ಪಿಕೆಪಿಎಸ್ ಸಹಕಾರ ಸಂಘಗಳು ಪ್ರತಿಶತ ಗಣಕಿಕೃತವಾದ ಸುದ್ದಿ ತಿಳಿದು ಸಂತಸವಾಗಿದೆ ಎಂದರು.ಸಹಕಾರ ಸಂಘಗಳ ಲೆಕ್ಕಪರಿಶೋಧಕ ಎಸ್. ಎಸ್. ಪತ್ತಾರ ಮಾತನಾಡಿದರು.
ಪ್ರಭು ಉಮದಿ ಸ್ವಾಗತಿಸಿದರು. ಕೃಷ್ಣಾ ಯರಕದ ಮತ್ತು ರವೀಂದ್ರ ಅಷ್ಟಗಿ ನಿರೂಪಿಸಿದರು.