ಮಾದಕ ವಸ್ತು ಸೇವನೆಯಿಂದ ವ್ಯತಿರಿಕ್ತ ಪರಿಣಾಮ :ಸಿಪಿಐ ಶ್ರೀಕಾಂತ್

KannadaprabhaNewsNetwork |  
Published : Jun 28, 2025, 12:18 AM IST
26 ಬೀರೂರು 2ಬೀರೂರು ಪಟ್ಟಣದ ಶಿಕ್ಷಣ ಇಲಾಖೆ, ಪುರಸಭೆ ಸಹಯೋಹಗದೊಂದಿಗೆ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋದಿ ದಿನದ ಅಂಗವಾಗಿ ಗುರುವಾರ ಬೀರೂರು ಪಟ್ಟಣ ವಿದ್ಯರ‍್ಥಿಗಳಿಗೆ ಅರಿವು ಮೂಡಿಸುವ ಜಾಥ ಹಮ್ಮಿಕೊಂಡು, ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ಮಾಡಿಸಿ, ಸಿಪಿಐ ಶ್ರೀಕಾಂತ್ ವಿದ್ಯರ‍್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಪುರಸಭೆ ಪ್ರಭಾರ ಅಧ್ಯಕ್ಷ ನಾಗರಾಜ್, ಮುಖ್ಯಾಧಿಕಾರಿ ಜಿ.ಪ್ರಕಾಶ್, ಬಿಇಒ ರುದ್ರಪ್ಪ ಮತ್ತು ಶಾಲಾ ಮಕ್ಕಳು ಇದ್ದರು. | Kannada Prabha

ಸಾರಾಂಶ

ಬೀರೂರು, ಮಾದಕ ವಸ್ತುಗಳ ಬಳಕೆ ಮನುಷ್ಯನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ನೆರೆಹೊರೆಯ ವಾತಾವರಣವನ್ನು ಕಲುಷಿತಗೊಳಿಸುತ್ತದೆ ಎಂದು ಬೀರೂರು ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ್ ಹೇಳಿದರು.

ಮಾನವ ಸರಪಳಿ । ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ-ಅಕ್ರಮ ಸಾಗಾಟ ವಿರೋಧಿ ದಿನ । ವಿದ್ಯಾರ್ಥಿ ಗಳಿಗೆ ಜಾಗೃತಿ ಜಾಥ

ಕನ್ನಡಪ್ರಭ ವಾರ್ತೆ, ಬೀರೂರು

ಮಾದಕ ವಸ್ತುಗಳ ಬಳಕೆ ಮನುಷ್ಯನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ನೆರೆಹೊರೆಯ ವಾತಾವರಣವನ್ನು ಕಲುಷಿತಗೊಳಿಸುತ್ತದೆ ಎಂದು ಬೀರೂರು ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ್ ಹೇಳಿದರು. ಪಟ್ಟಣದ ಶಿಕ್ಷಣ ಇಲಾಖೆ, ಪುರಸಭೆ ಸಹಯೋಗದಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಗುರುವಾರ ಬೀರೂರು ಪಟ್ಟಣ ವ್ಯಾಪ್ತಿಯ ಶಾಲಾ ವಿದ್ಯಾರ್ಥಿ ಗಳಿಗೆ ಅರಿವು ಮೂಡಿಸುವ ಜಾಥ ಹಮ್ಮಿಕೊಂಡು, ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಮಾತನಾಡಿದರು.ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ. ಆರ್ಥಿಕವಾಗಿ ದಿವಾಳಿ ಆಗುವುದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದರು. ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಣೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಜೂ.26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಆಚರಿಸಲಾಗುತ್ತದೆ. 1987 ಡಿ. 7ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜೂ. 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಲಾಯಿತು ಎಂದರು.ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಸಮಾಜದಲ್ಲಿ ಮಾದಕ ವಸ್ತುಗಳ ಬಳ, ಅಕ್ರಮ ಸಾಗಾಟ ತಡೆಯುವಲ್ಲಿ ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರು , ಪೋಷಕರು ಸೇರಿದಂತೆ ಇಂದಿನ ಯುವಜನತೆ ಸಹಕಾರ ಅತ್ಯವಶ್ಯಕ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.ಬಿಇಒ ಟಿ.ಆರ್.ರುದ್ರಪ್ಪ ಮಾತನಾಡಿ, ಭವಿಷ್ಯದ ಉತ್ತಮ ಪ್ರಜೆಗಳಾಗಲು, ಉತ್ತಮ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಯಾಗಬಾರದು. ಕುಟುಂಬದ ಮೇಲೆ ಪರಿಣಾಮ ಬೀರುವ ಮಾದಕ ವಸ್ತುಗಳಿಂದ ಅತ್ಯಂತ ಜಾಗೃತರಾಗಿರಬೇಕು. ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನ ನಡೆಸಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್ ಮಾತನಾಡಿ, ಇಂದಿನ ಯುವಕರು ತಂದೆ, ತಾಯಿ ಹಾಗೂ ಗುರುಗಳ ಋಣ ಎಂದಿಗೂ ಮರೆಯಬಾರದು. ಸದ್ಗುಣ ಸಚ್ಚಾರಿತ್ರ‍್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು. ಮಾದಕ ವಸ್ತುಗಳು ನಮ್ಮ ವ್ಯಕ್ತಿತ್ವಕ್ಕೆ ಹಾಗೂ ಆರೋಗ್ಯಕ್ಕೆ ಮಾರಕವಾಗಿವೆ ಎಂದರು. ಮೊಬೈಲ್ ಎಷ್ಟು ಪ್ರಯೋಜನವಾಗಿದೆ ಅಷ್ಟೇ ದುಷ್ಪರಿಣಾಮವಿದೆ. ವಿದ್ಯರ‍್ಥಿಗಳಾದ ನೀವು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕಿವಿಮಾತು ಹೇಳಿದರು.ಈ ಸಂರ‍್ಭದಲ್ಲಿ ಪುರಸಭೆ ಪ್ರಭಾರಿ ಅಧ್ಯಕ್ಷ ಎನ್.ಎಂ.ನಾಗರಾಜ್, ಪುರಸಭೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮತ್ತು ಸರ‍್ವಜನಿಕರು ಹಾಜರಿದ್ದರು.26 ಬೀರೂರು 2ಬೀರೂರು ಶಿಕ್ಷಣ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಗುರುವಾರ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಜಾಥ ಹಮ್ಮಿಕೊಂಡು, ಮಹಾತ್ಮ ಗಾಂಧಿ ವೃತ್ತದ ಮಾನವ ಸರಪಳಿ ಮಾಡಿಸಿ, ಸಿಪಿಐ ಶ್ರೀಕಾಂತ್ ವಿದ್ಯರ‍್ಥಿಗಳಿಗೆ ವಿದ್ಯಾರ್ಥಿ ವಿಧಿ ಭೋದಿಸಿದರು. ಪುರಸಭೆ ಪ್ರಭಾರ ಅಧ್ಯಕ್ಷ ನಾಗರಾಜ್, ಮುಖ್ಯಾಧಿಕಾರಿ ಜಿ.ಪ್ರಕಾಶ್, ಬಿಇಒ ರುದ್ರಪ್ಪ ಮತ್ತು ಶಾಲಾ ಮಕ್ಕಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ