ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು

KannadaprabhaNewsNetwork | Published : Aug 18, 2024 1:50 AM

ಸಾರಾಂಶ

ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಮತ್ತು ಅಕ್ರಮ ಮಾನವ ಸಾಗಾಣಿಕೆ ಬಗ್ಗೆ ಪ್ರತಿಯೊಬ್ಬರು ವಿಚಾರ ತಿಳಿದುಕೊಂಡಿರಬೇಕು ಎಂದು ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಮತ್ತು ಅಕ್ರಮ ಮಾನವ ಸಾಗಾಣಿಕೆ ಬಗ್ಗೆ ಪ್ರತಿಯೊಬ್ಬರು ವಿಚಾರ ತಿಳಿದುಕೊಂಡಿರಬೇಕು ಎಂದು ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ತಿಳಿಸಿದರು.

ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ಜೆಎಸ್ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆ ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳ ಸಾಗಣಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾನವ ಕಳ್ಳ ಸಾಗಣೆ ಬಗ್ಗೆ ಜಾಗೃತರಾಗಿ ಇರಬೇಕು. ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳು ಬಹು ಎಚ್ಚರಿಕೆಯಿಂದ ಇರಬೇಕು. ಶಾಲಾ ಅಂತದಿಂದಲೇ ಮಕ್ಕಳು ಮಾದಕ ಸೇವನೆ ಬಗ್ಗೆ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಜಾಗೃತಿ ಮೂಡಿಸುವ ಮೂಲಕ ಮಕ್ಕಳಿಗೆ ತಿಳಿಸಿಕೊಟ್ಟರು.

ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುರುಸ್ವಾಮಿ ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುವ ಮೂಲಕ ಉತ್ತಮ ವ್ಯಾಸಂಗ ಮಾಡಬೇಕು. ಮಾದಕ ದ್ರವ್ಯ ವೈಶಾಲಿ ಮತ್ತು ಅಕ್ರಮ ಸಾಗಾಣೆ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಾದ್ಯಂತ ನಡೆಯಲಾಗುತ್ತಿರುವ ಈ ಕಾರ್ಯಕ್ರಮದ ಬಗ್ಗೆ ಮಕ್ಕಳು ತಿಳಿದುಕೊಂಡಿರಬೇಕು. ವಿದ್ಯಾರ್ಥಿಗಳು ಅಪರಿಚಿತರ ಜೊತೆ ಮಾತನಾಡದೆ ಅಂತಹ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ತಮ್ಮ ಪೋಷಕರಿಗೆ, ಶಿಕ್ಷಕರಿಗೆ ತಿಳಿಸಿ ಸಂಬಂಧಪಟ್ಟ ಪೊಲೀಸ್ ಠಾಣೆ ಪೋಲಿಸರಿಗೆ ಮಾಹಿತಿ ನೀಡಿ. ನಿಮ್ಮ ವಿಳಾಸ ಮತ್ತು ನಿಮ್ಮ ಹೆಸರನ್ನು ಗುಪ್ತವಾಗಿ ಇಡಲಾಗುವುದು ಜೊತೆಗೆ ಅಂತಹ ಘಟನೆಗಳನ್ನು ತಡೆಯಲು ಅನುಕೂಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜೆಎಸ್ಎಸ್ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this article