ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ದೊಡ್ಡದಾಗಿದೆ. ವಿದ್ಯಾರ್ಥಿಗಳು ಸ್ವಾರ್ಥಪರ ಚಿಂತನೆ ಮಾಡದೆ ದೇಶದ ಬಗ್ಗೆ ಚಿಂತಿಸುವ ಅಗತ್ಯತೆಯಿದೆ. ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ತಮ್ಮ ಇಚ್ಛಾನುಸಾರ ಎನ್‌ಎಸ್‌ಎಸ್, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಂತಹ ಶಿಬಿರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ವ್ಯಕ್ತಿತ್ವ ಮತ್ತು ನಾಯಕತ್ವ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಶಿಕ್ಷಣದ ಜೊತೆ ನಮ್ಮನ್ನು ನಾವು ಸಮುದಾಯದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಮಾಜದ ನಿಜವಾದ ಸಮಸ್ಯೆಗಳನ್ನು ಅರಿತು ಆ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದು ಎಂದು ನುಡಿದರು.
ಆಧ್ಯಾತ್ಮದಿಂದ ನಕಾರಾತ್ಮಕ ಚಿಂತನೆಗಳು ದೂರ: ಶಾರದಾ
ರಕ್ಷಾ ಬಂಧನ ಅಂಗವಾಗಿ ಪತ್ರಕರ್ತರಿಗೆ ರಾಖಿ ಕಟ್ಟಿ ಮಾತನಾಡಿದ ಅವರು, ರಕ್ಷಾ ಬಂಧನ ಆಚರಣೆಯು ರಕ್ಷಣೆಯ ಸಂಕೇತವಾಗಿದ್ದು, ದೇಹ ಮತ್ತು ಆತ್ಮ ಎರಡಕ್ಕೂ ರಕ್ಷಣೆ ಬೇಕಿದೆ. ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಿದ್ದು, ನಮ್ಮಲ್ಲಿನ ನಕಾರಾತ್ಮಕ ಚಿಂತನೆ ಬಿಡಲು ಆಂತರಿಕ ಶಕ್ತಿಯ ಕೊರತೆಯಿದೆ. ಪರಮಾತ್ಮನ ಸಂಪರ್ಕದಿಂದ ಆತ್ಮಶಕ್ತಿ ಹೆಚ್ಚಾಗಿ ಋಣಾತ್ಮಕ ಚಿಂತನೆ ದೂರವಾಗಲಿದೆ ಎಂದು ಹೇಳಿದರು.
ರಕ್ಷಾಬಂಧನ ಪ್ರಯುಕ್ತ ರಾಖಿ ಕಟ್ಟಿ ಸಂಭ್ರಮಿಸುವುದು ಸಾಂಪ್ರದಾಯಿಕ ಆಚರಣೆಯಷ್ಟೇ. ಪವಿತ್ರ ಸಾಗರ ಭಗವಂತನ ಸಂಪರ್ಕದಿಂದ ಸಂಬಂಧದ ಆಚರಣೆಯಾಗಿ ರಕ್ಷಾ ಬಂಧನವನ್ನು ಸಂಭ್ರಮಿಸೋಣ ಎಂದು ಕರೆ ನೀಡಿದರು.