ತಾಲೂಕಲ್ಲಿ ಕುಡಿವ ನೀರಿಗೆ ತೊಂದರೆಆಗದಂತೆ ಎಚ್ಚರ ವಹಿಸಲು ಸೂಚನೆ

KannadaprabhaNewsNetwork |  
Published : Jul 24, 2026, 02:45 AM IST
ಬರಗಾಲದ ಛಾಯೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಅವರು ಗ್ರಾ.ಪಂ. ಅಧಿಕಾರಿಗಳ ಜೊತೆ ಸಭೆ ನಡೆಸಿದರು. | Kannada Prabha

ಸಾರಾಂಶ

ಹೊಸನಗರಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು, ಮಳೆಯಿಲ್ಲದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಿವಮೊಗ್ಗ ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಪಿಡಿಒಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹೊಸನಗರಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು, ಮಳೆಯಿಲ್ಲದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಿವಮೊಗ್ಗ ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಪಿಡಿಒಗಳಿಗೆ ಸೂಚಿಸಿದರು.

ತಾ.ಪಂ. ಸಭಾಂಗಣದಲ್ಲಿ ಹೊಸನಗರ ತಾಲೂಕು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನ ಎಲ್ಲ ಗ್ರಾ.ಪಂ. ಪಿಡಿಒಗಳು ಈ ವರ್ಷ ಎಚ್ಚರಿಕೆಯಿಂದ ಇರಬೇಕು. ನೀವು ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಸಂಭವವಿದೆ. ಯಾವುದೇ ಸಮಸ್ಯೆಯಿದ್ದರೂ ಟಾಸ್ಕ್ ಫೋರ್ಸ್ ಸಮಿತಿ ಗಮನಕ್ಕೆ ತನ್ನಿ ಎಂದು ಹೇಳಿದರು.

ರಾಜ್ಯದಲ್ಲಿ ಬರದ ಛಾಯೆ ದಟ್ಟವಾಗಿದೆ. ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾಧಿಕಾರಿಗಳಿಗೆ ತಾಲೂಕಿನ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಸುವಂತೆ ಈಗಾಗಲೇ ಸೂಚಿಸಿದ್ದಾರೆ. ಅದರಂತೆ ನಾವು ವರದಿ ನಿಡಬೇಕಾಗಿದೆ. ನಿಮ್ಮ ಗ್ರಾಮದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಟಾಸ್ಕ್ ಫೋರ್ಸ್ ಸಮಿತಿಯ ಮುಂದೆ ತಂದರೆ ಅನುಕೂಲವಾಗಲಿದೆ. ಇಲ್ಲವಾದರೆ ಕೊನೆಯ ಘಳಿಗೆಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ತೊಂದರೆಗೆ ಗ್ರಾ.ಪಂ. ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

24 ಗಂಟೇಲಿ ವರದಿ ನೀಡಿ:

ಅತಿವೃಷ್ಟಿ ಅಥವಾ ಮನೆಗಳ ಮೇಲೆ ಮರ ಬಿದ್ದು ಹಾನಿಯಾದರೆ 24 ಗಂಟೆಯೊಳಗೆ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದರು.

ಶಾಲೆ ಬಿಟ್ಟ ಮಕ್ಕಳ ಶಾಲೆಗೆ ಸೇರಿಸಿ:

ಹೊಸನಗರ ತಾಲೂಕಿನಲ್ಲಿ ಸಾಕಷ್ಟು ಮಕ್ಕಳು ಶಾಲೆ ಬಿಟ್ಟಿರುವ ವರದಿ ಬಂದಿದ್ದು, ಶಾಲೆ ಬಿಟ್ಟ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಪೋಷಕರನ್ನು ಪ್ರೇರೇಪಿಸಬೇಕು ಎಂದು ಪಿಡಿಒಗಳಿಗೆ ಆದೇಶಿಸಿದರು.

ಮಳೆ ಮಾಪನ ಕೇಂದ್ರ ಸರಿಪಡಿಸಿ:

ಹೊಸನಗರ ತಾಲೂಕಿನಲ್ಲಿ 30 ಗ್ರಾ.ಪಂ. ಯಲ್ಲಿ 29 ಮಳೆಮಾಪನಗಳು ಇದ್ದು, ಇವುಗಳು ಸರಿಯಾಗಿದೆಯೇ ಎಂದು ಪರೀಕ್ಷಿಸಿಕೊಂಡು, ಒಂದು ಪಕ್ಷ ಸರಿಯಾಗಿ ಇರದಿದ್ದರೆ ತಕ್ಷಣ ಸರಿಪಡಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಹೊಸನಗರ ತಾಲೂಕು ತಹಸೀಲ್ದಾರ್ ಭರತ್ರಾಜ್ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಅಧಿಕಾರಿಗಳಾದ ಪವನ್ ಕುಮಾರ್, ಮಂಜುನಾಥ್ ತಾಲೂಕಿನ ಎಲ್ಲ ಅಧಿಕಾರಿಗಳು, ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.--------------

ಬರಗಾಲದ ಛಾಯೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಅವರು ಗ್ರಾ.ಪಂ. ಅಧಿಕಾರಿಗಳ ಜೊತೆ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ನ್ಯಾಯದ ಹೋರಾಟಗಳ ಒಪ್ಪದ ಕೇಂದ್ರ ಸರ್ಕಾರ
ಸಿ.ಎಸ್. ಷಡಾಕ್ಷರಿ ಛಲಗಾರ: ಬಸಪ್ಪಗೌಡ ಶ್ಲಾಘನೆ