-ಹಿರಿಯ ವಿದ್ಯಾರ್ಥಿ ಕಿರಣ್ ಕಿವಿಮಾತು । ನೆಹರು ಜಯಂತಿ, ಮಕ್ಕಳ ದಿನಾಚರಣೆ ಕನ್ನಡಪ್ರಭ ವಾರ್ತೆ ಶಿಕಾರಿಪುರ
ಭವಾನಿ ರಾವ್ ಕೇರಿಯ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿ ಮತ್ತು ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಕೇವಲ ಅಂಕ ಗಳಿಕೆಯ ಹಿಂದೆ ಬೀಳದೆ, ಉತ್ತಮ ಸಂಸ್ಕಾರ, ಶಿಸ್ತು, ಸಮಯಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸೋಲುಗಳಿಗೆ ಎದೆಗುಂದದೆ, ಸಾಧಿಸುವ ಛಲದೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿ ಶಾಲಾ ದಿನದ ನೆನಪುಗಳನ್ನು ಸ್ಮರಿಸಿಕೊಂಡರು. ಪೋಷಕರಾದ ಬಸವರಾಜಪ್ಪಗೌಡ ಅವರು ಅವಳಿ ಶಾಲೆಗಳ ಶಿಕ್ಷಕರ ಕಾರ್ಯ ಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇಂದಿನ ಮಕ್ಕಳು ಮುಂದಿನ ಜೀವನದ ಕನಸು ಕಂಡು ಅದನ್ನು ನನಸು ಮಾಡುವುದರ ಮೂಲಕ ಪೋಷಕರಿಗೂ ಮತ್ತು ಶಿಕ್ಷಕರಿಗೂ, ತಾವು ಕಲಿತ ಶಾಲೆಯ ಕೀರ್ತಿ ಹೆಚ್ಚಿಸುವಲ್ಲಿ ವಿದ್ಯಾಭ್ಯಾಸ ಮಾಡಬೇಕು, ಪ್ರಯತ್ನಕ್ಕೆ ಪ್ರತಿಫಲ ನಿಶ್ಚಿತವಾಗಿದ್ದು, ಶಿಕ್ಷಕರು ಕೇವಲ ಮಾರ್ಗದರ್ಶಕರು ಮಾತ್ರ ವಿದ್ಯಾರ್ಥಿಗಳ ಪ್ರಯತ್ನ ಮುಖ್ಯವಾಗಿರಬೇಕಾಗುತ್ತದೆ ಎಂದರು.
ಪ್ರಾಚಾರ್ಯ ವಿಶ್ವನಾಥ.ಪಿ ಮತ್ತು ಪ್ರಭಾರಿ ಮುಖ್ಯ ಶಿಕ್ಷಕ ಪ್ರಶಾಂತ ಕುಬಸದ ರವರು ಮಕ್ಕಳಿಗೆ ಪ್ರೋತ್ಸಾಹದಾಯಕ ನುಡಿಗಳನ್ನಾಡಿದರು.
ಶಾಲಾ ಶಿಕ್ಷಕರು ಮತ್ತು ಕುಮದ್ವತಿ ಶಿಕ್ಷಣ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ನೃತ್ಯ ಪ್ರದರ್ಶಿಸಿದರು. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ವಿದ್ಯಾರ್ಥಿ ಸಂಸತ್ ಪ್ರತಿನಿಧಿಗಳು, ತರಗತಿಗಳ ನಾಯಕರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ ಮತ್ತು ಸಂಗಡಿಗರು ಪ್ರಾರ್ಥಿಸಿ, ಚಂದ್ರಮತಿ ಸ್ವಾಗತಿಸಿ, ವಿದ್ಯಾ ನಿರೂಪಿಸಿ, ಸ್ಮಿತಾ ವಂದಿಸಿದರು.
ಶಿಕಾರಿಪುರದ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿ ಮತ್ತು ಮಕ್ಕಳ ದಿನಾಚರಣೆಯನ್ನು ಹಿರಿಯ ವಿದ್ಯಾರ್ಥಿ ಕಿರಣ್ ಜಿ.ಬಿ ಉದ್ಘಾಟಿಸಿದರು.