ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ: ಕುಲಪತಿ ಪ್ರೊ.ಗಂಗಾಧರ್

KannadaprabhaNewsNetwork | Published : Jan 18, 2024 2:01 AM

ಸಾರಾಂಶ

ಚಾಮರಾಜನಗರ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿ ನೆಹರು ಯುವ ಕೇಂದ್ರ, ಚಾಮರಾಜನಗರ ವಿಶ್ವವಿದ್ಯಾನಿಲಯ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ ೧೬೧ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಭಾಗವಹಿಸುವಿಕೆ ದಿನದ ಪ್ರಯುಕ್ತ ಏರ್ಪಡಿಸಿದ್ದ ಚೀಟಿ ನೋಡಿ ಮಾತನಾಡುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿ ನೆಹರು ಯುವ ಕೇಂದ್ರ, ಚಾಮರಾಜನಗರ ವಿಶ್ವವಿದ್ಯಾನಿಲಯ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ ೧೬೧ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಭಾಗವಹಿಸುವಿಕೆ ದಿನದ ಪ್ರಯುಕ್ತ ಏರ್ಪಡಿಸಿದ್ದ ಚೀಟಿ ನೋಡಿ ಮಾತನಾಡುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಸ್ಪರ್ಧೆ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಹೆಚ್ಚಾಗಿ ಬಳಸುತ್ತಿದ್ದಾರೆ. ವ್ಯಾಸಂಗದ ಕಡೆ ಹೆಚ್ಚು ಕೇಂದ್ರೀಕರಿಸಬೇಕು. ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಪರಿಶ್ರಮದಿಂದ ಅಧ್ಯಯನ ಮಾಡಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ ಅವರು ಮಾತನಾಡಿ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಯುವ ವಿದ್ಯಾರ್ಥಿಗಳು ಪಾಲಿಸಬೇಕು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸಂದೇಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಬರಬೇಕು ಎಂದು ಸಲಹೆ ನೀಡಿದರು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಚಾಮರಾಜನಗರ ವಿ.ವಿ ಮೌಲ್ಯಮಾಪನ ಕುಲಸಚಿವ ಪ್ರೊ.ಪಿ. ಮಾದೇಶ್ ಅವರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಸಾಂಸ್ಕೃತಿಕ ಸೇವಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು. ತಾಳ್ಮೆ, ಶಿಸ್ತು, ಸಮಯಪ್ರಜ್ಞೆ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು. ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ ಬಂಗಾರು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಿದರು. ಉಪನ್ಯಾಸಕರಾದ ಡಾ. ಎಂ. ಮಾದೇವಮೂರ್ತಿ, ಮೂಕಳ್ಳಿ ಬಸವಣ್ಣ, ನೆಹರು ಯುವ ಕೇಂದ್ರದ ಸಹನ, ಶಂಕರ, ಸಮಾಜ ಸೇವಕರಾದ ಕಾರ್ತಿಕ್ ನಾಯಕ್, ಮಹೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share this article