ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸುವಂತೆ ಸೂಚನೆ

KannadaprabhaNewsNetwork |  
Published : May 24, 2025, 12:27 AM ISTUpdated : May 24, 2025, 12:28 AM IST
23ಎಚ್ಎಸ್ಎನ್16 :  | Kannada Prabha

ಸಾರಾಂಶ

ಮಳೆಗಾಲ ಆರಂಭವಾಗಿರೋ ಹಿನ್ನೆಲೆಯಲ್ಲಿ ಲಾರ್ವ ಸಮೀಕ್ಷೆ, ಡೆಂಘೀ ನಿಯಂತ್ರಣ, ಮಲೇರಿಯಾ ರೋಗ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಗ್ರಾಮ ಹಾಗೂ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು, ಚರಂಡಿ ಮತ್ತು ಇನ್ನಿತರೆ ಗುಂಡಿಗಳಲ್ಲಿ ಹೆಚ್ಚು ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹರಿಸಬೇಕು ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ಮುಂಗಾರು ಮಳೆ ಆರಂಭವಾಗಿದ್ದು, ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಪಂಚಾಯಿತಿ ಅಧಿಕಾರಿ ವರ್ಗದವರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕೆಂದು ತಹಸೀಲ್ದಾರ್‌ ಮಲ್ಲಿಕಾರ್ಜುನ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಡೆದ ವಿಶ್ವ ಮಲೇರಿಯಾ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲ ಆರಂಭವಾಗಿರೋ ಹಿನ್ನೆಲೆಯಲ್ಲಿ ಲಾರ್ವ ಸಮೀಕ್ಷೆ, ಡೆಂಘೀ ನಿಯಂತ್ರಣ, ಮಲೇರಿಯಾ ರೋಗ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಗ್ರಾಮ ಹಾಗೂ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು, ಚರಂಡಿ ಮತ್ತು ಇನ್ನಿತರೆ ಗುಂಡಿಗಳಲ್ಲಿ ಹೆಚ್ಚು ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹರಿಸಬೇಕು. ಅಸಾಂಕ್ರಾಮಿಕ ರೋಗಗಳಾದ ಗರ್ಭ ಕೊರಳ ಕ್ಯಾನ್ಸರ್‌, ಕ್ಯಾನ್ಸರ್‌, ತನ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ರಕ್ತದೊತ್ತಡ, ಮಧುಮೇಹ ಕಾಯಿಲೆಗಳು ಹೆಚ್ಚಾಗುತ್ತಿದ್ದು ಎಲ್ಲಾ ಗ್ರಾಮಗಳಲ್ಲಿ ಈ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ನಾಗಪ್ಪ ಜೆಎಸ್ ಮಾತನಾಡಿ, ರಾಜ್ಯದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ಮಲೇರಿಯಾ ರೋಗಗಳ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು ಗ್ರಾಮೀಣ ಭಾಗದ ಜನರು ಜಾಗೃತಿ ವಹಿಸುವಂತೆ ಹಾಗೂ ಸ್ವಚ್ಛತೆ ಕಡೆಗೆ ಹೆಚ್ಚಿನ ನಿಗ ವಹಿಸುವಂತೆ ಆರೋಗ್ಯ ಸಿಬ್ಬಂದಿಗಳು ಜಾಗೃತಿ ಮೂಡಿಸಬೇಕು. ಲಾರ್ವತಾನಗಳ ಶುದ್ಧೀಕರಣ ಹಾಗೂ ಯಾವುದೇ ಜ್ವರ ಕಂಡುಬಂದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ತಜ್ಞರಿಂದ ಚಿಕಿತ್ಸೆಯನ್ನು ಪಡೆಯುವುದು ಸೂಕ್ತ. ಮುಖ್ಯವಾಗಿ ಮನೆಯಲ್ಲಿ ಒಳಾಂಗಣ ಮತ್ತು ಹೊರಾಂಗಣ ನೀರಿನ ತಾಣಗಳಾದ ತೊಟ್ಟಿ, ಡ್ರಮ್, ಬ್ಯಾರೆಲ್ ಹೊರಗಡೆ ಬಿಸಾಡಿದ ಟೈರು, ಪ್ಲಾಸ್ಟಿಕ್ ವಸ್ತುಗಳು, ಒಳಕಲ್ಲು, ಮುಂತಾದವುಗಳನ್ನು ಸುತ್ತಳತೆಯಲ್ಲಿ ವಿಲೇವಾರಿ ಮಾಡಲು ತಿಳಿಸಿದರು.

ಸಭೆಯಲ್ಲಿ ತಾಲೂಕು ವೈದ್ಯಾಧಿಕಾರಿ ನಿಸಾರ್ ಫಾತಿಮಾ, ಬಿಎಚ್‌ಈಒ ಸತೀಶ್, ಪಟ್ಟಣಪಂಚಾಯತಿ ಮುಖ್ಯ ಅಧಿಕಾರಿ ಮಂಜುನಾಥ್, ಗ್ರಾಮ ಪಂಚಾಯತಿ ಪಿಡಿಒಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ