ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾದ್ಯಂತದ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ, ರಾಜ್ಯದಲ್ಲಿ ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿಯಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿರುವಂತೆ ಕ್ರೀಡಾಕೂಟಗಳಲ್ಲಿಯೂ ಕೂಡ ಹೆಸರು ಪಡೆಯುವಂತಾಗಬೇಕು ಎಂದರು.ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿ, ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು, ಮುಂದೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಬೇಕು. ಜಿಲ್ಲೆಯ ಕ್ರೀಡಾಳುಗಳು ಉತ್ತಮ ಸಾಧನೆ ಮಾಡಿ ಯಶಸ್ವಿಯಾಗಬೇಕು ಎಂದು ಶುಭ ಹಾರೈಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ, ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಡಾ.ಜಿ.ಶಂಕರ್ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಕ ಡಾ.ರಾಮಚಂದ್ರ ಪಾಟ್ಕರ್ ಮತ್ತಿತರರು ಉಪಸ್ಥಿತರಿದ್ದರು.