ಬೆಂಗಳೂರು ಗ್ರಾ. ಜಿಲ್ಲೆ ಹೆಸರು ಬೆಂ. ಉತ್ತರವೆಂದು ಬದಲು?

KannadaprabhaNewsNetwork |  
Published : Jul 02, 2025, 01:47 AM IST
ಬೆಂಗಳೂರು | Kannada Prabha

ಸಾರಾಂಶ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಿದ ಸರ್ಕಾರ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಆಲೋಚಿಸಿದೆ. ಬುಧವಾರ ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ.

ಕೋಲಾರ, ಚಿಕ್ಕಬಳ್ಳಾಪುರ

ಜಿಲ್ಲೆಗೆ ಭರ್ಜರಿ ಕೊಡುಗೆ

ಬೆಂಗಳೂರು: ನಂದಿಬೆಟ್ಟದಲ್ಲಿ ಬುಧವಾರ ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 456 ಕೋಟಿ ರು.ಗಳ ಹಲವು ಮಹತ್ವದ ಯೋಜನೆಗಳನ್ನು ನೀಡುವ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ. ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಸಂಪುಟ ಸಭೆಯಲ್ಲಿ ನಿರ್ಧಾರವಾಗುವ ನಿರೀಕ್ಷೆ ಇದೆ.

==

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಿದ ಸರ್ಕಾರ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಆಲೋಚಿಸಿದೆ. ಬುಧವಾರ ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ.

ಪ್ರತಿಪಕ್ಷಗಳ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸರ್ಕಾರ ಬದಲಾವಣೆ ಮಾಡಿತ್ತು. ಇದರ ಬಳಿಕ ತುಮಕೂರು ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರಿಸಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೇರಿ ಕೆಲವರು ಒತ್ತಾಯಿಸಿದರು. ಆದರೆ, ಸರ್ಕಾರ ಇದೀಗ ಬೆಂ.ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾಯಿಸುವ ಸಂಬಂಧ ಬುಧವಾರ ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಿದೆ.

ಅಧಿವೇಶನಕ್ಕೆ ದಿನಾಂಕ ನಿಗದಿ:

ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸಮಾವೇಶಗೊಳಿಸಲು ಬುಧವಾರದ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ. ಅಧಿವೇಶನವನ್ನು ಯಾವಾಗ ಆರಂಭಿಸಬೇಕು, ಎಷ್ಟು ದಿನ ನಡೆಸಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

==

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ