11ರಿಂದ ಮೇ 28ರವರೆಗೆ ಬಿಸಿಊಟ: ಇಟ್ನಾಳ್

KannadaprabhaNewsNetwork |  
Published : Apr 07, 2024, 01:46 AM IST
ಕ್ಯಾಪ್ಷನಃ6ಕೆಡಿವಿಜಿ34ಃದಾವಣಗೆರೆಯಲ್ಲಿ ಜಿಪಂ ಸಿಇಓ ಸುರೇಶ ಬಿ.ಇಟ್ನಾಳ್ ಅಧ್ಯಕ್ಷತೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. | Kannada Prabha

ಸಾರಾಂಶ

ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನೆಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏ.11ರಿಂದ ಮೇ 28ರವರೆಗೆ ಭಾನುವಾರ ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ನಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ದಾವಣಗೆರೆ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನೆಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏ.11ರಿಂದ ಮೇ 28ರವರೆಗೆ ಭಾನುವಾರ ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ನಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಬಿಸಿಯೂಟವನ್ನು ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಲಾಗುತ್ತದೆ. ಶಾಲೆಗಳ ಬೇಸಿಗೆ ರಜೆ ಏ.11ರಿಂದ ಆರಂಭವಾಗಲಿದ್ದು, ಅಂದಿನಿಂದಲೇ ರಜೆ ಬಿಸಿಯೂಟ ಆರಂಭವಾಗಬೇಕೆಂದರು.

ಶಾಲೆ ಆಯ್ಕೆ: ಗ್ರಾಮ, ಕೇಂದ್ರ ಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಅವುಗಳಲ್ಲಿ ಹೆಚ್ಚು ಮಕ್ಕಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಶಾಲೆಗೆ ಇತರೆ ಶಾಲೆ ಮಕ್ಕಳು ಬಂದು ಊಟ ಮಾಡಿ ಹೋಗಬಹುದಾಗಿದೆ. ಪ್ರತಿ 2 ಕಿಮೀ ವ್ಯಾಪ್ತಿಯ ಒಳಗೆ ಕೇಂದ್ರಗಳನ್ನು ಗುರುತಿಸುವ ಕೆಲಸ ಮಾಡಬೇಕಾಗಿದೆ. 250ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ನಿರ್ವಹಣೆಗೆ ಹೆಚ್ಚುವರಿಯಾಗಿ ಶಿಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬಹುದಾಗಿದೆ ಎಂದರು.

ಪೋಷಕರಿಂದ ಒಪ್ಪಿಗೆ ಪತ್ರ: ಬೇಸಿಗೆ ರಜೆಯಲ್ಲಿ ಶಾಲೆಗೆ ಬಂದು ಊಟ ಮಾಡುವ ವಿದ್ಯಾರ್ಥಿಗಳ ವಿವರವನ್ನು ಸಂಗ್ರಹಿಸಲು ತಿಳಿಸಿ. ಯಾರು ಬಿಸಿಯೂಟ ಮಾಡಲು ಮಕ್ಕಳನ್ನು ಕಳುಹಿಸಲು ಒಪ್ಪಿಗೆ ನೀಡುವ ಪೋಷಕರಿಂದ ಒಪ್ಪಿಗೆ ಪತ್ರ ಸಂಗ್ರಹಿಸಬೇಕು. ಆ ಮಕ್ಕಳಿಗೆ ಮಾತ್ರ ಹಿಂದಿನ ಮೆನುವಿನಂತೆ ಊಟ ತಯಾರು ಮಾಡಿ ವಿತರಣೆ ಮಾಡಬೇಕಾಗಿದೆ ಎಂದರು.

ಶುದ್ಧ ಕುಡಿಯುವ ನೀರು, ಕಲಬೆರೆಕೆ ಆಹಾರ ತಡೆ: ಬಿಸಿಯೂಟ ಮಾಡುವ ಕೇಂದ್ರಗಳಿಗೆ ಆಯಾ ಗ್ರಾಮ ಪಂಚಾಯಿತಿಗಳು ಮತ್ತು ತಾಲೂಕು ಕೇಂದ್ರವಾಗಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು.

ಅಡುಗೆ ಕೇಂದ್ರ ಗುರುತಿಸಿ ಮಾಹಿತಿ ನೀಡಲು ಸೂಚನೆ: ಬೇಸಿಗೆ ರಜೆಯಲ್ಲಿ ಬಿಸಿಯೂಟ ನೀಡಲಾಗುತ್ತಿರುವ ಶಾಲೆಗಳ ವಿವರ, ಅಂದರೆ ಯಾವ ಶಾಲೆಯ ವಿದ್ಯಾರ್ಥಿಗಳಿಗೆ ಯಾವ ಶಾಲೆ ಕೇಂದ್ರಕ್ಕೆ ಟ್ಯಾಗ್ ಮಾಡಲಾಗಿದೆ ಎಂದು ಆಯಾ ಶಾಲಾ ಸೂಚನಾ ಫಲಕದಲ್ಲಿ ಬೇಸಿಗೆ ರಜೆಗೂ ಮೊದಲೇ ಪ್ರಚುರಪಡಿಸಬೇಕು. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ದುರುಗಪ್ಪ, ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ