ಚಾಮರಾಜನಗರ ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ವ್ಯಕ್ತಿ ಯೊಬ್ಬರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ನಡೆದಿದೆ. ಬೇಡರಪುರ ಗ್ರಾಮದ ಲಿಂಗಪ್ಪ (42) ಗಾಯಗೊಂಡ ವ್ಯಕ್ತಿ. ಗಾಯಾಳುವನ್ನು ಚಾಮರಾಜನಗರದ ಖಾಸಗಿ ಆಸ್ಪತ್ರೆಗೆ ಗಾಯಾಳು ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಚಾಮರಾಜನಗರ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಡಿಜಿಲ್ಲೆಯಲ್ಲಿ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿರುವುದಕ್ಕೆ ಆತಂಕ ವ್ಯಕ್ತವಾಗಿದೆ.
ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಂಗಳವಾರ ಹನೂರು ತಾಲೂಕಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆಯು ದಾಳಿ ಮಾಡಿತ್ತು. ಅದೃಷ್ಟವಶಾತ್ ಬಾಲಕ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದ. ಜ.21ರಂದು ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬಾತ ಬೆಟ್ಟಕ್ಕೆ ಹೋಗುವಾಗ ಚಿರತೆ ದಾಳಿಗೆ ಅಸುನೀಗಿದ್ದರು. ಈ ಎಲ್ಲ ಘಟನೆಗಳಿಂದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.