ರಾಜ್ಯಾದ್ಯಂತ ಹಸು ಹಾಗೂ ಕರುವಿನ ಮೇಲೇ ಕಿಡಿಗೇಡಿಗಳು ಹಲ್ಲೆ ನಡೆಸುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ಹೋರಿ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆಯಲ್ಲಿ ನಡೆದಿದೆ.
- ಹೋರಿ ಕರು ಮೇಲೆ ಮಚ್ಚಿನಿಂದ ಹಲ್ಲೆ
- ಸಕಲೇಶಪುರ ತಾಲೂಲಲ್ಲಿ ರಕ್ಕಸ ಕೃತ್ಯ-ಆಗಿದ್ದೇನು?- ಸಕಲೇಶಪುರ ಬಳಿ ಅರಕೆರೆ ಗ್ರಾಮದ ನವೀನ್ ಮನೆಯಲ್ಲಿದ್ದ ಕರು
- ಮನೆಗೆ ನುಗ್ಗಿ ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಮಚ್ಚಿನಿಂದ ಹಲ್ಲೆ- ರಕ್ತದ ಮಡುವಿನಲ್ಲಿ ಬಿದ್ದು ಹೋರಿ ಕರು ಒದ್ದಾಟ, ವೈದ್ಯರ ಚಿಕಿತ್ಸೆ- ಈ ಹಿಂದೆಯೂ ಇಂಥ ಘಟನೆ ನಡದಿತ್ತು, ಪೊಲೀಸರಿಂದ ಶೋಧ
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯಾದ್ಯಂತ ಹಸು ಹಾಗೂ ಕರುವಿನ ಮೇಲೇ ಕಿಡಿಗೇಡಿಗಳು ಹಲ್ಲೆ ನಡೆಸುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ಹೋರಿ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆಯಲ್ಲಿ ನಡೆದಿದೆ.
ಅರೆಕೆರೆ ಗ್ರಾಮದ ನವೀನ್ ಎಂಬುವವರ ಮನೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಕಿಡಿಗೇಡಿಗಳು ಮಚ್ಚಿನಿಂದ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕರುವಿನ ಕುತ್ತಿಗೆ ಹಾಗೂ ಬೆನ್ನಿನ ಮೇಲೆ ಗಂಭೀರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಕರುವನ್ನು ನವೀನ್ ಅವರು ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ದುಷ್ಕರ್ಮಿಗಳಿಗೆ ಬಲೆ ಬೀಸಿದ್ದಾರೆ.
ಈ ಹಿಂದೆಯೂ ನವೀನ್ ಅವರು ಸಾಕಿದ್ದ ಜಾನುವಾರುಗಳ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದರು ಎಂದು ತಿಳಿದು ಬಂದಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.