ಐಎಂಜೆಐಎಸ್‌ಸಿಯಲ್ಲಿ ಆಘೋಷಂ ಓಣಂ ಸಂಭ್ರಮ

KannadaprabhaNewsNetwork |  
Published : Sep 03, 2026, 02:45 AM IST
01ಓಣಂ | Kannada Prabha

ಸಾರಾಂಶ

ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಲಲಿತಕಲಾ ಸಂಘದ ವತಿಯಿಂದ ಆಘೋಷಂ- ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಲಲಿತಕಲಾ ಸಂಘದ ವತಿಯಿಂದ ಆಘೋಷಂ- ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ . ಪ್ರತಿಭಾ ಎಂ. ಪಟೇಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಓಣಂ ಹಬ್ಬದ ಕಥೆ ಮತ್ತು ಅದರ ಸಾಂಸ್ಕೃತಿಕ ಮಹತ್ವ ಸಾರುವ ಕಿರುನಾಟಕದ ಮೂಲಕ ಹಬ್ಬದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸಿದರು. ಸಂಭ್ರಮದ ಅಂಗವಾಗಿ ವಿದ್ಯಾರ್ಥಿನಿಯರು ದೀಪದ ಸುತ್ತ ಸಾಂಪ್ರದಾಯಿಕ ತಿರುವಾತಿರ ನೃತ್ಯವನ್ನು ಪ್ರದರ್ಶಿಸಿ ಹಬ್ಬಕ್ಕೆ ಮೆರಗು ನೀಡಿದರು. ಐಕ್ಯಮ್ ತಂಡಗಳ ನಡುವೆ ಆಯೋಜಿಸಲಾದ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಜೊತೆಗೆ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳು ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಬಿಂಬಿಸುವ ಸಾಂಸ್ಕೃತಿಕ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು. ಈ ಆಚರಣೆಯು ಏಕತೆ, ತಂಡದ ಕೆಲಸ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿ ಮೂಡಿಬಂದಿತು. ಲಲಿತಕಲಾ ಉಪನ್ಯಾಸಕ ಸಂಯೋಜಕರಾದ ಶ್ರೀನಿಧಿ ಮತ್ತು ನಿಧಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಶ್ರೀರಕ್ಷಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಮಗಾರಿ ವಿಳಂಬ, ಕಳಪೆ ಗುಣಮಟ್ಟ: ಪೊನ್ನಣ್ಣ ಅಸಮಾಧಾನ
ಒಳಚರಂಡಿ ಜಾಲಕ್ಕೆ ಸಂಪರ್ಕ: ಡಾ. ಮಂತರ್ ಗೌಡ ಸೂಚನೆ