ವಯಸ್ಸಾಗುವುದು ಸಂಖ್ಯೆಗಷ್ಟೇ, ಚೈತನ್ಯಕ್ಕಲ್ಲ

KannadaprabhaNewsNetwork |  
Published : Sep 14, 2024, 01:58 AM IST
ಚಿತ್ರದುರ್ಗ ಮೂರನೇ ಪುಟದ  ಮಿಡ್ಲ್   | Kannada Prabha

ಸಾರಾಂಶ

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು. ವಯಸ್ಸಾಗುವುದು ಸಂಖ್ಯೆಗಷ್ಟೇ, ಚೈತನ್ಯಕ್ಕಲ್ಲ ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು. ವಯಸ್ಸಾಗುವುದು ಸಂಖ್ಯೆಗಷ್ಟೇ, ಚೈತನ್ಯಕ್ಕಲ್ಲ ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಶುಕ್ರವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅ.1 ರಂದು ಇಡೀ ವಿಶ್ವದಾದ್ಯಂತ ವಿಶ್ವ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರೆಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯಬೇಕೆಂದೇನು ಇಲ್ಲ. ದೈಹಿಕವಾಗಿ ಚಟುವಟಿಕೆಯಿಂದರಲು ಈ ಸ್ಪರ್ಧೆ ಸಹಕಾರಿಯಾಗಿದೆ. ಸಮಾಜದಲ್ಲಿ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವಕಾಶಗಳು ಸಿಗುವುದು ಕಡಿಮೆ. ಆದ್ದರಿಂದ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವ ನಾಗರೀಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರೀಕರಿಗೆ ಕ್ರೀಡಾಕೂಟ ಹಾಗೂ ಸಾಂಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಉಲ್ಲಾಸ, ಉತ್ಸಾಹ ನೆಮ್ಮದಿ ನೀಡುವುದರ ಜತೆಗೆ, ಹಿರಿಯ ನಾಗರಿಕರ ಸಾಮರ್ಥ್ಯಕ್ಕೆ ಈ ವೇದಿಕೆ ಸಾಕ್ಷಿಯಾಗಲಿದೆ ಎಂದರು.

ಹಿರಿಯ ನಾಗರಿಕರಿಗೆ ಮ್ಯೂಜಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ರಿಂಗ್ ಎಸೆಯುವ ಸ್ಪರ್ಧೆ, ಗಾಯನ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ನಡೆಸಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಸಿ. ಸೋಮಶೇಖರಯ್ಯ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಿ .ಹರಿಪ್ರಸಾದ್ ವಂದಿಸಿದರು. ಬಾಲಭವನ ನಿರ್ವಾಹಕ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್. ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ. ವೀಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಪರಿವೀಕ್ಷಣಾಧಿಕಾರಿ ಸುರೇಶ್ ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತವಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ