ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಬಿಡಿಎ ಕಚೇರಿಯ ಸಭಾಂಗಣದಲ್ಲಿ ಶಾಸಕ ಬಾಲಕೃಷ್ಣರವರು ಬಿಡದಿ ಟೌನ್ ಶಿಪ್ ಯೋಜನೆ ಪರವಾಗಿರುವ ರೈತರ ಸಭೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿರುವ ರೈತರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿ ಕೊಳ್ಳಬೇಕಾಗಿದೆ. ಹೀಗಾಗಿ ಅವರ ಭೇಟಿಗೆ ಅವಕಾಶ ಕಲ್ಪಿಸುವುದಾಗಿ ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದ್ದಾರೆ ಎಂದರು.
ಪರಿಹಾರದ ಮೊತ್ತ ಮಾತ್ರವಲ್ಲದೆ, ರೈತರ ಇತರ ಸಮಸ್ಯೆಗಳನ್ನು ಪರಿಹರಿಸಿಕೊಡಬೇಕಾಗಿದೆ. ಇದರೊಟ್ಟಿಗೆ 12 ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಭೂಸ್ವಾಧೀನ ಪ್ರದೇಶದಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಬಡ ಕುಟುಂಬಗಳು, ಕೂಲಿ ಕಾರ್ಮಿಕರು, ವಸತಿ ರಹಿತರ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದ್ದೇವೆ ಎಂದು ವಿವರಿಸಿದರು.ಅಂತಿಮ ಅಧಿಸೂಚನೆ ಹೊರಡಿಸಿರುವ ಪ್ರದೇಶದಲ್ಲಿ ನಾಳೆಯಿಂದಲೇ ಜೆಎಂಸಿ ಆರಂಭಿಸಬೇಕೆಂದು ಶಾಸಕರನ್ನು ಒತ್ತಾಯಿಸಿದ್ದೇವೆ. ಇದಕ್ಕೆ ಶಾಸಕರು ಮತ್ತು ಜಿಬಿಡಿಎ ಅಧ್ಯಕ್ಷರು ಒಪ್ಪಿಗೆ ವ್ಯಕ್ತಪಡಿಸಿದ್ದಾರೆ. ಜೆಎಂಸಿ ಆದ ನಂತರ ತಕ್ಷಣ ಪರಿಹಾರದ ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬೇಕು ಎಂದು ಒತ್ತಡ ಹೇರಿದ್ದೇವೆ ಎಂದು ಹೊಸೂರು ರಾಜಣ್ಣ ಹೇಳಿದರು.
ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಸ್ವಾಧೀನವಾದ ಭೂಮಿ ಮತ್ತು ಜೆಎಂಸಿಗೆ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡುವಂತೆಯೂ ಸಭೆಯಲ್ಲಿ ಸಲಹೆ ನೀಡಿದ್ದೇವೆ. ಬಿಡದಿ ಟೌನ್ ಶಿಪ್ ಯೋಜನೆ ಬೇಗ ಪೂರ್ಣಗೊಂಡು ಅಭಿವೃದ್ದಿಯಾದ ನಿವಶೇನಗಳನ್ನು ಕೊಟ್ಟರೆ, ನಮ್ಮ ಮಕ್ಕಳ ಜೀವನಕ್ಕೆ ಒಳಿತಾಗುತ್ತದೆ. ಸರ್ಕಾರ ಇದನ್ನು ಗಮನಿಸಬೇಕು ಎಂದು ತಿಳಿಸಿದರು.