ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿ ತಜ್ಞ ಪ್ರತಿನಿಧಿಗಳ ಸಭೆ

KannadaprabhaNewsNetwork |  
Published : Jan 01, 2026, 04:00 AM IST
ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಅಧ್ಯಕ್ಷತೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಕೃಷಿ ತಜ್ಞ ಪ್ರತಿನಿಧಿಗಳ ಸಭೆ  | Kannada Prabha

ಸಾರಾಂಶ

2026-27ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಂಗಳೂರು: 2026-27ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬಳಿಕ ಮಾತನಾಡಿದ ಅವರು, ಎಸ್‌ಸಿಡಿಸಿಸಿ ಬ್ಯಾಂಕ್ 2025-26ನೇ ಸಾಲಿಗೆ ಬೆಳೆ ಸಾಲಗಳ ಗುರಿ 2,150.00 ಕೋಟಿ ರು. ಆಗಿದ್ದು, ಈಗಾಗಲೇ 1,533.19 ಕೋಟಿ ರು. ಬೆಳೆ ಸಾಲ ನೀಡಲಾಗಿದೆ. 31-03-2025ರ ಅಂತ್ಯಕ್ಕೆ ಬೆಳೆ ಸಾಲಗಳ ಹೊರಬಾಕಿ 2,123.11 ಕೋಟಿ ರು. ಆಗಿದೆ ಎಂದರು.

ನಬಾರ್ಡ್ ಪುರ್ನಧನ ಸಾಲ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2024-25ನೇ ಸಾಲಿನಲ್ಲಿ ಒಟ್ಟು 2,300.74 ಕೋಟಿ ರು. ಅವಧಿ ಸಾಲ ನೀಡಲಾಗಿದೆ. 2025-26 ನೇ ಸಾಲಿಗೆ ಈಗಾಗಲೇ (ನವೆಂಬರ್ -2025ರ ವರೆಗೆ) 107.45 ಕೋಟಿ ರು. ಮಧ್ಯಮಾವಧಿ/ದೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ತಿಳಿಸಿದರು.

2026-27ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

ಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು , ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕುಶಾಲಪ್ಪ ಗೌಡ, ಎಸ್. ಎನ್. ಮನ್ಮಥ, ಕೆ. ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮಹೇಶ್ ಹೆಗ್ಡೆ, ಎಸ್. ಬಿ. ಜಯರಾಮ ರೈ,

ದ.ಕ. ಹಾಗೂ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರುಗಳಾದ ಎಚ್‌. ಎನ್. ರಮೇಶ್ ಮತ್ತು ಲಾವಣ್ಯ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿ ಗೋಪಾಲಕೃಷ್ಣ ಭಟ್ ಕೆ., ಮಂಗಳೂರು ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಕವಿತಾ ಶೆಟ್ಟಿ, ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಕೆ.ಎಸ್.ಮಹಾದೇವಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ, ಉಡುಪಿ ಜಿಲ್ಲೆಯ ಉಪ ನಿರ್ದೇಶಕ ಚಂದ್ರಶೇಖರ್ ನಾಯ್ಕ, ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದರ್ಶನ್ ಜಿ., ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಮಲತಾ, ರಬ್ಬರ್ ಬೋರ್ಡ್ ಡೆವೆಲಪ್ ಮೆಂಟ್ ಅಫೀಸರ್ ಮಿನಿ ನೀನನ್, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲ್ ಇದರ ಅಸಿಸ್ಟೆಂಟ್ ಪ್ರೊಫೆಸರ್ ನಿಶ್ಮಿತಾ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಸಹಕಾರ ಸಂಘಗಳ ಸಹಾಯಕ ನಿಬಂಧಕರುಗಳಾದ ತ್ರಿವೇಣಿ ರಾವ್, ಸುಧೀರ್ ಕುಮಾರ್, ಎಸ್. ಎಂ. ರಘು ಮತ್ತು ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ