ಕನ್ನಡಪ್ರಭ ವಾರ್ತೆ ಬೀದರ್
ಈ ಕುರಿತು ಬೆಂಗಳೂರಿನಲ್ಲಿ ರಾಜ್ಯದ ಕೃಷಿ ಸಚಿವರಿಗೆ ಭೇಟಿಯಾಗಿ ಮನವಿ ಸಲ್ಲಿಸಿ ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ರೈತರಿಗೆ ಪ್ರತಿ ಹೆಕ್ಟರ 35 ಸಾವಿರ ರು. ಈಗಾಗಲೇ ರೈತರ ಖಾತೆಗೆ ಜಮೆ ಮಾಡಿದೆ ಅದರಂತೆ ಮಹಾರಾಷ್ಟ್ರ ಮಾದರಿಯಲ್ಲಿ ಸಹಾಯ ಮಾಡಬೇಕು ಅಲ್ಲದೆ ಜಿಲ್ಲೆಯ ರೈತರ ₹2 ಲಕ್ಷದ ವರೆಗಿನ ಸಾಲ ಮನ್ನಾ ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.
ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಜೀವನಾಧಾರವಾಗಿರುವ ಹಳ್ಳಿಖೇಡ್ (ಬಿ) ಸಮೀಪದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯನ್ನು ಉಳಿಸಿ, ಶೀಘ್ರವೇ ಪುನಶ್ಚೇತನಗೊಳಿಸಿ ಕಾರ್ಯಾರಂಭ ಮಾಡಬೇಕೆಂದು ಆಗ್ರಹಿಸಿದ್ದಾರೆ.ಬಿಎಸ್‌ಎಸ್‌ಕೆ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವುದರಿಂದ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಯ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಖಾನೆ ಪುನರಾರಂಭವಾದರೆ ಜಿಲ್ಲೆಯ ಸಾವಿರಾರು ರೈತ ಕುಟುಂಬಗಳಿಗೆ ಕಬ್ಬು ಮಾರಾಟಕ್ಕೆ ಸ್ಥಳೀಯ ಮಾರುಕಟ್ಟೆ ದೊರೆಯುವುದರ ಜೊತೆಗೆ ನೂರಾರು ಕಾರ್ಮಿಕರ ಕುಟುಂಬಗಳ ಬದುಕಿಗೂ ಆಧಾರವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕಾರ್ಖಾನೆಯನ್ನು ಹರಾಜು ಮಾಡುವ ಬದಲು ಸರ್ಕಾರದ ಮಧ್ಯಸ್ಥಿಕೆಯಲ್ಲಿ ಪುನಶ್ಚೇತನ ಕ್ರಮ ಕೈಗೊಂಡು, ಸೂಕ್ತ ನಿರ್ವಹಣೆ ಹಾಗೂ ಹಣಕಾಸಿನ ವ್ಯವಸ್ಥೆ ಕಲ್ಪಿಸಬೇಕು. ರೈತರ ಹಿತದೃಷ್ಟಿಯಿಂದ ಕಾರ್ಖಾನೆಯನ್ನು ಮತ್ತೆ ಕಾರ್ಯನಿರ್ವಹಿಸುವಂತೆ ಮಾಡುವುದು ಅತ್ಯಗತ್ಯ ಎಂದು ಒತ್ತಾಯಿಸಿದ್ದಾರೆ.