ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ : ಎಚ್. ಡಿ. ರೇವಣ್ಣ ಆಗ್ರಹ

KannadaprabhaNewsNetwork |  
Published : Feb 06, 2025, 12:20 AM ISTUpdated : Feb 06, 2025, 12:27 PM IST
5ಎಚ್ಎಸ್ಎನ್18 : ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಡಿ.ರೇವಣ್ಣ. | Kannada Prabha

ಸಾರಾಂಶ

 ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 ಹಾಸನ : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಸಬೇಕು. ಆದರೆ ಕೃಷಿ ಸಚಿವರು ಈ ಕಾಲೇಜನ್ನು ಮಂಡ್ಯಕ್ಕೆ ಕೊಂಡೊಯ್ಯುವ ಹುನ್ನಾರ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ವಿಶ್ವ ವಿದ್ಯಾಲಯದ ಅಡಿಯಲ್ಲಿ ಕೃಷಿ ಕಾಲೇಜು ಇರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ. ಆದ್ದರಿಂದ ಜಿಲ್ಲೆಯ ಜೆಡಿಎಸ್ ನ ನಾಲ್ವರು ಶಾಸಕರು ಸೇರಿ ಮುಖ್ಯಮಂತ್ರಿಗಳು, ಸಂಬಂಧಿಸಿದ ಇಲಾಖೆ ಸಚಿವರು ಹಾಗೂ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಹಾಸನ ಕೃಷಿ ಕಾಲೇಜು ಬೆಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ಅನುಕೂಲ ಆಗಲಿದೆ, ಪ್ರತಿಷ್ಟಿತ ವಿಶ್ವ ವಿದ್ಯಾಲಯವಾಗಿ ಗುರುತಿಸಿಕೊಂಡಿರುವ ಬೆಂಗಳೂರು ವಿವಿಯನ್ನು ವಿಭಾಗ ಮಾಡುವ ಕೆಲಸ ಮಾಡಬಾರದು. ಶಾಸಕರಾದ ಸುರೇಶ್, ಮಂಜು ಅವರಿಗೂ ಪತ್ರ ಬರೆಯಲು ಹೇಳುವೆ ಎಂದರು. ಕೃಷಿ ವಿವಿ ವಿಚಾರವನ್ನು ರಾಜಕೀಯವಾಗಿ ತೆಗೆದುಕೊಂಡರೆ ಅಂಥವರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಹಾಸನದ ಸೋಮನಹಳ್ಳಿ ಕಾವಲು ಜಾಗದಲ್ಲಿ ೨೫೦ ಎಕರೆ ಜಾಗದಲ್ಲಿ ತೋಟಗಾರಿಕೆ ವಿವಿ ಮಾಡಲು ಹೊರಟಾಗ ಅದಕ್ಕೂ ಅಡ್ಡಿಪಡಿಸಿದ್ದರು. ಒಂದು ವೇಳೆ ಕೃಷಿ ಕಾಲೇಜನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ಸೇರಿಸಿದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಬೇಕಾದರೆ ಮಂಡ್ಯದಲ್ಲಿ ಹೊಸ ಕಾಲೇಜು ಸ್ಥಾಪನೆ ಮಾಡಲಿ. ಈ ಹಿಂದೆ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ಅಧಿವೇಶನದಲ್ಲಿ ಹೋರಾಟ ಮಾಡಿ ಹಾಸನದಲ್ಲಿ ಉಳಿಸಿದ್ದೇನೆ. ಇದಲ್ಲದೆ ಹಾಸನದಲ್ಲಿ ೭೬೦ ಅಂಗನವಾಡಿ ಹುದ್ದೆಗಳು ಖಾಲಿ ಇವೆ, ಜಿಲ್ಲಾಡಳಿತ ಸಂದರ್ಶನ ಹಾಗೂ ನೇಮಕಾತಿಗೆ ಅವಕಾಶ ನೀಡುತ್ತಿಲ್ಲ, ಹೊರ ಗುತ್ತಿಗೆ ನೌಕರರಿಗೆ, ಬೋಧಕ ಬೋಧಕೇತರ ಸಿಬ್ಬಂದಿ ಸೇರಿದಂತೆ ಹಲವರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ ಎಂದು ದೂರಿದರು.

ತೆರಿಗೆ ಹಣ ಕಾರ್ಯಕರ್ತರ ಪಾಲು:

ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕರು, ಕಾರ್ಯಕರ್ತರಿಗೆ ಡಿಸಿಎಂ ಡಿಕೆಶಿ ಆಫರ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಬ್ಬರ ಮನೆ ಬಾಗಿಲಿಗೆ ಬಂದು ಕರೆಯುವ ದುಸ್ಥಿತಿ ಬಂದಿದೆ. ಇವರು ಬೇರೆ ಸಮಯದಲ್ಲಿ ದೇವೇಗೌಡರು, ಕುಮಾರಣ್ಣನ ಕಾಲು ಹಿಡಿಯುತ್ತಾರೆ. ಕಾಂಗ್ರೆಸ್ ಪಕ್ಷವು 136 ಸೀಟುಗಳನ್ನು ಗೆದ್ದು, ಗ್ಯಾರಂಟಿ ಯೋಜನೆಗಳನ್ನೂ ಕೊಟ್ಟಿದ್ದರೂ ಎಲ್ಲಿ, ಯಾವಾಗ ಸರ್ಕಾರ ಬಿದ್ದೋಗುತ್ತೋ ಎಂದು ಬೇರೆಯವರನ್ನು ಪಕ್ಷಕ್ಕೆ ಕರೆಯುವ ದುಸ್ಥಿತಿ ಬಂದಿದೆ. ಇವಕ್ಕೆಲ್ಲ ಜೆಡಿಎಸ್ ಎಂದಿಗೂ ಹೆದರಲ್ಲ, ನಮ್ಮ ಟೈಂ ಬರುತ್ತದೆ, ದೇವೇಗೌಡರ ಕಣ್ಮುಂದೆ ಇನ್ನೂ ಏನೇನು ನಡೆಯುತ್ತದೋ ನೋಡೋಣ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ