ಸ್ಪ್ರಿಂಕ್ಲರ್‌ಗೆ ಕೃಷಿ ಇಲಾಖೆ ಶೇ.90 ಸಹಾಯಧನ

KannadaprabhaNewsNetwork |  
Published : Jan 30, 2025, 12:31 AM IST
32 | Kannada Prabha

ಸಾರಾಂಶ

2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‌ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‌ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತಿದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಪ್ರಯೋಜನ ಪಡೆಯಬಹುದು. ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣ ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‌ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.

ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರು.2496 ಹಣ ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‌ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿ ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬಹುದು. ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತರೂ ಯೋಜನೆ ಸದುಪಯೋಗ ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಕೆ.ಪಿ. ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ