ಕನ್ನಡಪ್ರಭ ವಾರ್ತೆ ಮಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗೆ ಕೆಲವೊಂದು ಕೊಡುಗೆ ಪ್ರಕಟಿಸಿದರೂ ಅದು ಸರಿಯಾಗಿ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.
ಮಂಗಳೂರಿನಲ್ಲಿ ಜವುಳಿ ಪಾರ್ಕ್ ಸ್ಥಾಪಿಸಿ ೧ ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಹೇಳಿದ್ದ ಗ್ಯಾರಂಟಿ ಕಾರ್ಯಕ್ರಮ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಗೊಳ್ಳಬಹುದೇ ಎಂಬ ಕುತೂಹಲವಿದೆ.
ಮಂಗಳೂರಿನ ಹಳೆ ಬಂದರು ಸಮೀಪದ ಅಳಿವೆ ಬಾಗಿಲಿನಲ್ಲಿ ಹೂಳೆತ್ತುವ ಮೂಲಕ ಬೋಟ್‌ಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂಬುದು ಮೀನುಗಾರರ ಬೇಡಿಕೆ. ಈ ಬಾರಿಯಾದರೂ ಡ್ರೆಜ್ಜಿಂಗ್‌ಗೆ ಗರಿಷ್ಠ ಮೊತ್ತ ಸಿಗಬೇಕು ಎಂಬ ನಿರೀಕ್ಷೆ ಮೀನುಗಾರರಲ್ಲಿದೆ.ಫಲ್ಗುಣಿ ಹಾಗೂ ನೇತ್ರಾವತಿ ನದಿ ಪಾತ್ರದಲ್ಲಿ ಬಾರ್ಜ್ ಸೇವೆ ಆರಂಭ, ಮಂಗಳೂರು- ಕಾರವಾರ-ಗೋವಾ ಮುಂಬಯಿ ಜಲಮಾರ್ಗ ಸ್ಥಾಪನೆ ಇತ್ಯಾದಿಗಳನ್ನು ಜಾರಿಗೊಳಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ಹೇಳಿರುವುದು ಇದುವರೆಗೆ ಕಾರ್ಯಗತವಾಗಿಲ್ಲ. ಇವುಗಳನ್ನು ಈ ಬಾರಿಯಾದರೂ ಜಾರಿಗೊಳಿಸುವ ಬೇಡಿಕೆ ಪ್ರವಾಸಿಗರದ್ದು.
ಈಡೇರದ ಐಟಿ ಪಾರ್ಕ್ ಬೇಡಿಕೆ:
ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ ರಚನೆ ಘೋಷಣೆಯಾದರೂ ಕಾರ್ಯಗತಗೊಂಡಿಲ್ಲ.
-ಅಡಕೆ ಕೃಷಿಕರು ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗ ನಿರಂತರವಾಗಿ ಬಾಧಿಸುತ್ತಿದ್ದರೂ ಅದಕ್ಕೆ ಶಾಶ್ವತ ಪರಿಹಾರದತ್ತ ಸರ್ಕಾರಗಳು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಅಲ್ಲದೆ ಅತ್ಯಾಧುನಿಕ ತಂತ್ರಜ್ಞಾನದ ಮಣ್ಣು ಪರೀಕ್ಷಾ ಕೇಂದ್ರವನ್ನು ದ.ಕ. ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ರೈತರ ಬೇಡಿಕೆ ಇದೆ.
-ರಬ್ಬರ್ ಬೆಳೆಗಾರರ ಹಿತರಕ್ಷಣೆಗೆ ಸೂಕ್ತ ಯೋಜನೆ,
-ಮೀನುಗಾರಿಕೆಗೆ ಅನುಕೂಲವಾಗಲು ಹೂಳೆತ್ತುವಿಕೆ, ಸಣ್ಣ ಬಂದರುಗಳ ಅಭಿವೃದ್ಧಿ.